ಆರ್.ಆರ್. ನಗರ ಉಪಚುನಾವಣೆ | ಮುನಿರತ್ನಂ ಬೆಂಬಲಿಗರಿಂದ ಕಾಂಗ್ರೆಸ್ ಪರ ಪ್ರಚಾರಕರ ಮೇಲೆ ಹಲ್ಲೆ | ಪ್ರತಿಭಟನೆ

Prasthutha|

ಬೆಂಗಳೂರು : ರಾಜರಾಜೇಶ್ವರಿ ನಗರ ಉಪಚುನಾವಣೆ ಪ್ರಚಾರ ಬಿರುಸಿನಿಂದ ಸಾಗಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನಂ ಬೆಂಬಲಿಗರು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಬೆಂಬಲಿಗರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆದಿದೆ.

- Advertisement -

ಲಕ್ಷ್ಮೀದೇವಿನಗರ ಬೂತ್ ನಂಬರ್ 156 ಬಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಅವರ ಪರ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರಾದ ಜವರೇಗೌಡ, ಕಾರ್ಯಕರ್ತರಾದ ಚಿಕ್ಕರಾಜು, ರಾಕೇಶ್, ವಿನೋದ್, ರೂಪೇಶ್, ಮಾಲಿಕ್ ಮತ್ತು ಇತರ ಮುಖಂಡರ ಮೇಲೆ ಬಿಜೆಪಿ ಅಭ್ಯರ್ಥಿ ಮುನಿರತ್ನಂ ನಾಯ್ಡು ಬೆಂಬಲಿಗ ವೇಲು ನಾಯ್ಕರ್ ಮತ್ತು 30 ಕ್ಕೂ ಹೆಚ್ಚು ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಬೂತ್ ಮಟ್ಟದಲ್ಲಿ ಮತದಾರರಿಗೆ ಗುರುತಿನ ಚೀಟಿ ವಿತರಣೆ ನಡೆಸಲು ಸಂಗ್ರಹಿಸಿದ್ದ ಮಾಹಿತಿಯ ಪುಸ್ತಕ ಹರಿದು ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮಾಜಿ ಸಂಸದ ಧೃವನಾರಯಣ್ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರಚಾರದ ವೇಳೆಯೂ ವೇಲು ನಾಯ್ಕರ್ ಮತ್ತು ಸಹಚರರು ಬೆದರಿಕೆ ಹಾಕಿದ್ದಾರೆ. ಇದನ್ನು ಖಂಡಿಸಿ, ಬಿಜೆಪಿ ಅಭ್ಯರ್ಥಿ ಮುನಿರತ್ನಂ ನಾಯ್ಡು ವಿರುದ್ಧ ಕಾಂಗ್ರೇಸ್ ನಾಯಕರು ನಂದಿನಿ ಲೇಔಟ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.

- Advertisement -

ಹಿರಿಯ ನಾಯಕರಾದ ಹೆಚ್.ಎಂ.ರೇವಣ್ಣ, ಮಾಜಿ ಸಂಸದ ಧೃವ ನಾರಾಯಣ್, ಮಾಜಿ ಶಾಸಕ ಬಾಲರಾಜ್, ಮಾಜಿ ಬಿಬಿಎಂಪಿ ಸದಸ್ಯ ಶಿವರಾಜ್, ಕಾಂಗ್ರೆಸ್ ಮುಖಂಡ ಆರಾಧ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಕಾನೂನು ವಿಭಾಗದ ಸೂರ್ಯ ಮುಕುಂದರಾಜ್, ಚೇತನ್ ಶಂಕರಪ್ಪ ಮತ್ತು ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

https://www.facebook.com/PrasthuthaNews/videos/1004869593322042/
Join Whatsapp