ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ಮಗನ ವಿರುದ್ಧ ED ಸಮನ್ಸ್

Prasthutha|

ಚಂಡೀಗಢ : ಪಂಜಾಬ್ ಮುಖ್ಯಮಂತ್ರಿ ಕ್ಯಾ. ಅಮರೀಂದರ್ ಸಿಂಗ್ ಕೇಂದ್ರದ ರೈತ ವಿರೋಧಿ ಕೃಷಿ ನೀತಿ ವಿರುದ್ಧ ಕಠಿಣ ನಿಲುವು ತೆಗೆದುಕೊಂಡು, ತನ್ನದೇ ಹೊಸ ಕೃಷಿ ಮಸೂದೆ ಮಂಡಿಸಿದ ಬೆನ್ನಲ್ಲೇ, ಅವರ ಮಗ ರಣೀಂದರ್ ಸಿಂಗ್ ವಿರುದ್ಧ ಜಾರಿ ನಿರ್ದೇಶನಾಲಯ (ED) ಸಮನ್ಸ್ ಜಾರಿಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಆರೋಪಗಳ ನಡುವೆ, ಜಾರಿ ನಿರ್ದೇಶನಾಲಯದ ಈ ನಡೆ ಮತ್ತೊಮ್ಮೆ ಅದರ ಬಗ್ಗೆ ಸಂಶಯ ಪಡುವಂತೆ ಮಾಡಿದೆ.

- Advertisement -

ಅ.27ರೊಳಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ತನ್ನ ಸಮನ್ಸ್ ನೋಟಿಸ್ ನಲ್ಲಿ ರಣೀಂದರ್ ಸಿಂಗ್ ಗೆ ಸೂಚಿಸಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್ ಇಎಂಎ) ನಿಯಮಗಳನ್ನು ಉಲ್ಲಂಘಿಸಿದ್ದ ಆರೋಪಗಳ ವಿಚಾರಣೆಗಾಗಿ ನೋಟಿಸ್ ಜಾರಿಗೊಳಿಸಲಾಗಿದೆ.

ಪಂಜಾಬ್ ನ ಲುಧಿಯಾನದಲ್ಲಿ ಆದಾಯ ತೆರಿಗೆ ಇಲಾಖೆ ರಣೀಂದರ್ ಸಿಂಗ್ ವಿರುದ್ಧ ಪ್ರಕರಣವೊಂದನ್ನು ದಾಖಲಿಸಿರುವ ಹಿನ್ನೆಲೆಯಲ್ಲಿ, ಜಾರಿ ನಿರ್ದೇಶನಾಲಯವೂ ಸಮನ್ಸ್ ಜಾರಿಗೊಳಿಸಿದೆ.
2016ರಲ್ಲೂ ರಣದೀರ್ ಸಿಂಗ್ ವಿರುದ್ಧ ಜಾರಿ ನಿರ್ದೇಶನಾಲಯ ವಿಚಾರಣೆಗೆ ಕ್ರಮ ಕೈಗೊಂಡಿತ್ತು. ಸ್ವಿಜರ್ ಲ್ಯಾಂಡ್ ನಲ್ಲಿ ನ ಹಣ ವ್ಯವಹಾರಕ್ಕೆ ಸಂಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಜಾರಿ ನಿರ್ದೇಶನಾಲಯದ ಕ್ರಮವನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ. ಕೇಂದ್ರದ ಕೃಷಿ ಕಾನೂನಿಗೆ ಪ್ರತಿಯಾಗಿ ಅಮರೀಂದರ್ ಸಿಂಗ್ ಸರಕಾರ ಈ ವಾರ ಮೂರು ಮಸೂದೆಗಳಿಗೆ ಅನುಮೋದನೆ ಪಡೆದಿದೆ.

- Advertisement -

ನ.17ರಿಂದ ಕಾಲೇಜು ಆರಂಭಿಸುವುದಾಗಿ ಸರಕಾರ ಘೋಷಿಸಿದೆ. ಈ ಬಗ್ಗೆ ಪರ-ವಿರೋಧ ಹೇಳಿಕೆಗಳು ವ್ಯಕ್ತವಾಗುತ್ತಿವೆ. ಕೋವಿಡ್ – 19 ಪ್ರಕರಣಗಳು ಇನ್ನೂ ಸಾಕಷ್ಟು ದೊಡ್ಡ ಪ್ರಮಾಣದಲ್ಲಿರುವಾಗ ಕಾಲೇಜು ಆರಂಭಿಸಲು ಸರಕಾರ ನಿರ್ಧಾರ ಕೈಗೊಂಡಿರುವುದು ಸರಿಯೇ? ತಪ್ಪೇ? ಎಂಬ ಬಗ್ಗೆ ‘ಪ್ರಸ್ತುತ’ ಜನಾಭಿಮತ ಸಂಗ್ರಹಿಸುತ್ತಿದೆ. ಈ ಬಗ್ಗೆ ನಿಮ್ಮ ನಿಲುವನ್ನು ‘ಪ್ರಸ್ತುತ’ ಫೇಸ್ ಬುಕ್ ಪೇಜ್ ನಲ್ಲಿ ವ್ಯಕ್ತಪಡಿಸಿ.

https://www.facebook.com/2171161852895947/posts/3694124020599715/

Join Whatsapp