ಭಾರತದಲ್ಲಿ ಕಾರ್ಯಚಟುವಟಿಕೆ ನಿಲ್ಲಿಸಿದ ಆಮ್ನೆಸ್ಟಿ ಇಂಟರ್ ನ್ಯಾಷನಲ್

Prasthutha|

ಸರಕಾರದಿಂದ ಕಿರುಕುಳ ಆರೋಪ

- Advertisement -

ನವದೆಹಲಿ : ಕೇಂದ್ರ ಸರಕಾರವು ವಿವಿಧ ಕಾರಣಗಳನ್ನು ನೀಡಿ ತನ್ನನ್ನು ಭೇಟೆಯಾಡುತ್ತಿದೆ ಎಂದು ಆರೋಪಿಸಿ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಭಾರತದಲ್ಲಿ ತನ್ನ ಕಾರ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ.

ಈ ತಿಂಗಳ ಆರಂಭದಲ್ಲಿ ಕೇಂದ್ರ ಸರಕಾರವು ಸಂಘಟನೆಯ ಖಾತೆಗಳನ್ನು ಸ್ಥಗಿತಗೊಳಿಸಿತ್ತು. ಸಂಘಟನೆಗೆ ವಿದೇಶಿ ಹಣ ಹರಿದು ಬರುತ್ತಿದೆ. ವಿದೇಶಿ ಸಂಭಾವನೆ (ರೆಗ್ಯುಲೇಶನ್) ಕಾಯ್ದೆಯಡಿ ನೋಂದಣಿಯಾಗಿಲ್ಲ ಎಂದು ಕೇಂದ್ರ ಸರಕಾರ ಹೇಳಿತ್ತು.

- Advertisement -

ಸೆಪ್ಟೆಂಬರ್ 10ರಂದು ಮೋದಿ ಸರಕಾರ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿತ್ತು. ಇದರೊಂದಿಗೆ ಭಾರತದಲ್ಲಿ ಸಂಘಟನೆಯ ಎಲ್ಲಾ ಚಟುವಟಿಕೆಗಳನ್ನು ಸ್ಥಗಿತಗೊಳಿಸುವುದಾಗಿ ಆಮ್ನೆಸ್ಟಿ ಇಂಟರ್ ನ್ಯಾಷನಲ್ ಹೇಳಿಕೆಯಲ್ಲಿ ತಿಳಿಸಿದೆ.

ಭಾರತದ ಎಲ್ಲಾ ಉದ್ಯೋಗಿಗಳನ್ನು ಹಿಂಪಡೆಯಲು ಮತ್ತು ಅದರ ಪ್ರಚಾರ ಹಾಗೂ ಸಂಶೋಧನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಒತ್ತಾಯಿಸಲಾಗಿದೆಯೆಂದು ಸಂಘಟನೆ ತಿಳಿಸಿದೆ. ಸಂಘಟನೆಯು ಎಲ್ಲಾ ಭಾರತೀಯ ಮತ್ತು ಅಂತರರಾಷ್ಟ್ರೀಯ ಕಾನೂನುಗಳನ್ನು ಪಾಲಿಸುತ್ತಿದೆ. ಭಾರತ ಸರಕಾರವು ಮಾನವ ಹಕ್ಕುಗಳ ಸಂಘಟನೆಗಳಿಗೆ ಆಧಾರರಹಿತ ಆರೋಪಗಳೊಂದಿಗೆ ನಿರಂತರವಾಗಿ ಕಿರುಕುಳ ನೀಡುತ್ತಿರುವುದಕ್ಕೆ ಇದು ಉದಾಹರಣೆಯಾಗಿದೆ ಎಂದು ಆಮ್ನೆಸ್ಟಿ ಇಂಡಿಯಾ ಸಂಸ್ಥೆ ಟೀಕಿಸಿದೆ.

ಕಾಶ್ಮೀರಕ್ಕೆ ವಿಶೇಷ ಹಕ್ಕುಗಳನ್ನು ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿರುವುದು,ಫೆಬ್ರವರಿಯಲ್ಲಿ ಈಶಾನ್ಯ ದಿಲ್ಲಿಯಲ್ಲಿ ನಡೆದ ಮುಸ್ಲಿಂ ವಿರೋಧಿ ಗಲಭೆಗಳು ಮತ್ತು ಜಮ್ಮು ಕಾಶ್ಮೀರದಲ್ಲಿ ನಡೆದ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಆಮ್ನೆಸ್ಟಿ ಇತ್ತೀಚೆಗೆ ಟೀಕಿಸಿತ್ತು.

Join Whatsapp