ಆತ್ಮಹತ್ಯೆ ಪ್ರಚೋದನೆ ಕೇಸ್ | ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಗೆ ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು ಮಂಜೂರು

Prasthutha|

ನವದೆಹಲಿ : ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ಬಂಧಿತನಾಗಿರುವ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ, ಬಿಜೆಪಿ ಬೆಂಬಲಿಗ ಪತ್ರಕರ್ತ ಅರ್ನಾಬ್ ಗೋಸ್ವಾಮಿಗೆ ಸುಪ್ರೀಂ ಕೋರ್ಟ್ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

- Advertisement -

ಗೋಸ್ವಾಮಿಗೆ ಬಾಂಬೆ ಹೈಕೋರ್ಟ್ ನ.9ರಂದು ಜಾಮೀನು ನಿರಾಕರಿಸಿದ್ದ ಹಿನ್ನೆಲೆಯಲ್ಲಿ, ಆತ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ.

ಈ ಕುರಿತ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ರಾಜ್ಯ ಸರಕಾರದ ಕ್ರಮವನ್ನು ಟೀಕಿಸಿದೆ. ಅಲ್ಲದೆ, ಗೋಸ್ವಾಮಿಗೆ ಜಾಮೀನು ಮಂಜೂರು ಮಾಡಿದೆ ಎಂದು ‘ಬಾರ್ & ಬೆಂಚ್’ ವರದಿ ಮಾಡಿದೆ.

- Advertisement -

ಇಂಟಿರಿಯರ್ ಡಿಸೈನರ್ ಅನ್ವಯ್ ನಾಯ್ಕ್ ಮತ್ತು ಅವರ ತಾಯಿ ಕುಮುದ ನಾಯ್ಕ್ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆಪಾದನೆಯಲ್ಲಿ ಗೋಸ್ವಾಮಿ ಬಂಧಿತನಾಗಿದ್ದ.

Join Whatsapp