August 25, 2020

BIG BREAKING | ಅಣ್ಣಾಮಲೈ ಬಿಜೆಪಿ ಅಧಿಕೃತ ಸೇರ್ಪಡೆ

ನವದೆಹಲಿ : ಕರ್ನಾಟಕದಲ್ಲಿ ಭಾರೀ ಖ್ಯಾತರಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕುಪ್ಪುಸ್ವಾಮಿ ಮಂಗಳವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ದೆಹಲಿಯಲ್ಲಿನ ಪಕ್ಷದ ಕೇಂದ್ರ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮುರಳೀಧರ ರಾವ್ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್. ಮುರುಗನ್ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಕರ್ನಾಟಕದಲ್ಲಿ ದಕ್ಷ ಅಧಿಕಾರಿ, ಸಿಂಗಂ ಎಂದೆಲ್ಲ ಖ್ಯಾತಿ ಪಡೆದಿದ್ದ ಅಣ್ಣಾಮಲೈ ಈಗ ಬಿಜೆಪಿ ಸೇರ್ಪಡೆಯಾಗಿರುವುದು ಸಾಕಷ್ಟು ಅವರ ಅಭಿಮಾನಿಗಳಲ್ಲಿ ನಿರಾಸೆಯನ್ನು ಮೂಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಸಂಬಂಧ ಅವರನ್ನು ಟ್ರೋಲ್ ಮಾಡಲಾಗುತ್ತಿದೆ. ಇನ್ನೊಂದೆಡೆ, ಅವರ ಬಿಜೆಪಿ ಸೇರ್ಪಡೆಯನ್ನು ಬಿಜೆಪಿ ಬೆಂಬಲಿತರು ದೊಡ್ಡ ಮಟ್ಟದಲ್ಲಿ ಸ್ವಾಗತಿಸಿ ಸಂಭ್ರಮಿಸುತ್ತಿದ್ದಾರೆ.  

ಟಾಪ್ ಸುದ್ದಿಗಳು

ವಿಶೇಷ ವರದಿ