November 5, 2020

2016ರ ಯೋಗೀಶ್ ಗೌಡ ಹತ್ಯೆ ಪ್ರಕರಣ | ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ

ಬೆಂಗಳೂರು : 2016ರಲ್ಲಿ ನಡೆದ ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಸರಕಾರದಲ್ಲಿ ಸಚಿವರಾಗಿದ್ದ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಧಾರವಾಡದ ತಮ್ಮ ಶಿವಗಿರಿ ನಿವಾಸದಿಂದ ಕುಲಕರ್ಣಿ ಅವರನ್ನು ಇಂದು ಮುಂಜಾನೆ ಏಳು ಗಂಟೆಗೆ ವಶಕ್ಕೆ ಪಡೆಯಲಾಗಿದೆ.

ಧಾರವಾಡ ಉಪನಗರ ಪೊಲೀಸ್ ಠಾಣೆಗೆ ವಿನಯ್ ಕುಲಕರ್ಣಿ ಅವರನ್ನು ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಅವರನ್ನು ಬಂಧಿಸಲಾಗುತ್ತದೆಯೇ? ಅತವಾ ವಿಚಾರಣೆ ಉದ್ದೇಶಕ್ಕಾಗಿ ವಶಕ್ಕೆ ಪಡೆಯಲಾಗಿದೆಯೇ? ಎಂಬುದು ಸ್ಪಷ್ಟವಾಗಿಲ್ಲ.
ವಿನಯ್ ಕುಲಕರ್ಣಿ ಅವರ ಸಹೋದರ ವಿಜಯ್ ಕುಲಕರ್ಣಿ ಅವರನ್ನೂ ಸಿಬಿಐ ವಶಕ್ಕೆ ಪಡೆದಿದೆ.

ಯೋಗೀಶ್ ಗೌಡ ಅವರನ್ನು 2016ರ ಜೂನ್ ನಲ್ಲಿ ಧಾರವಾಡದ ಜಿಮ್ ಒಂದರಲ್ಲಿ ಹತ್ಯೆ ಮಾಡಲಾಗಿತ್ತು. ಸಿಎಂ ಯಡಿಯೂರಪ್ಪ ಸರಕಾರ ಪ್ರಕರಣವನ್ನು ಸಿಬಿಐ ತನಿಖೆಗೊಪ್ಪಿಸಿತ್ತು.

ಟಾಪ್ ಸುದ್ದಿಗಳು

ವಿಶೇಷ ವರದಿ