ಡ್ರಗ್ಸ್ ಪ್ರಕರಣ | ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನ ಬಂಧನ

Prasthutha|

ಡ್ರಗ್ಸ್ ಪ್ರಕರಣ | ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನ ಬಂಧನ

- Advertisement -

ಬೆಂಗಳೂರು : ಡ್ರಗ್ಸ್ ಪ್ರಕರಣದ ಸಂಬಂಧ ಮಾಜಿ ಸಚಿವ ಹಾವೇರಿಯ ರುದ್ರಪ್ಪ ಲಮಾಣಿ ಅವರ ಪುತ್ರ ದರ್ಶನ್ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಡ್ರಗ್ಸ್ ಜಾಲದಲ್ಲಿದ್ದ ಹೇಮಂತ್ ಮತ್ತು ಸುನೇಶ್ ಎಂಬವರು ತಲೆ ಮರೆಸಿಕೊಂಡಿದ್ದರು. ಅವರಿಬ್ಬರ ಬಂಧನಕ್ಕಾಗಿ ಸಿಸಿಬಿ ಪೊಲೀಸರ ತಂಡ ಗೋವಾಕ್ಕೆ ತೆರಳಿತ್ತು. ಅವರಿಬ್ಬರನ್ನು ಅಲ್ಲಿಯೇ ಬಂಧಿಸಲಾಗಿದೆ.

- Advertisement -

ಡ್ರಗ್ಸ್ ಪ್ರಕರಣದ ಆರೋಪಿಗಳಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿ, ಅವರಿಗೆ ಸಹಕಾರ ನೀಡಿದ್ದ ಆರೋಪದಡಿ ದರ್ಶನ್ ಅವರನ್ನೂ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮೂವರನ್ನೂ ಸಿಸಿಬಿ ವಶಕ್ಕೆ ಪಡೆಯಲಾಗಿದೆ. ವಿಚಾರಣೆ ನಡೆಯುತ್ತಿದೆ.

Join Whatsapp