November 19, 2020

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಆದೇಶ ಕೈಬಿಟ್ಟ ಸರಕಾರ | ಕನ್ನಡಿಗರ ಒತ್ತಡಕ್ಕೆ ಮಣಿದ ಬಿಎಸ್ ವೈ

ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಆದೇಶವನ್ನು ಕೈಬಿಡಲು ಸರಕಾರ ನಿರ್ಧರಿಸಿದೆ. ಅದಕ್ಕೆ ಬದಲಾಗಿ ಮರಾಠ ಸಮುದಾಯಕ್ಕೆ ಸೀಮಿತವಾಗಿ ನಿಗಮ ರಚಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ವರದಿಯೊಂದು ತಿಳಿಸಿದೆ.

ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕನ್ನಡಿಗರ ವಿರೋಧಕ್ಕೆ ಮಣಿದ ಸರ್ಕಾರ ಈ ಆದೇಶವನ್ನು ರದ್ದು ಮಾಡಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮರಾಠ ಸಮುದಾಯಕ್ಕೆ ಸೀಮಿತವಾದ ನಿಗಮ ರಚಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಪ್ರಾಧಿಕಾರ ರಚಿಸುವಾಗ ಹೊಸದಾಗಿ ಕಾಯ್ದೆ ರೂಪಿಸಬೇಕಿದೆ. ನಿಗಮಕ್ಕೆ ಸರ್ಕಾರವೇ ತೀರ್ಮಾನ ಕೈಗೊಳ್ಳಬಹುದಾಗಿದೆ. ಮರಾಠ ಸಮುದಾಯಕ್ಕೆ ಸೀಮಿತವಾಗಿ ನಿಗಮ ರಚಿಸಲಾಗುವುದು ಎನ್ನಲಾಗಿದೆ.

ಟಾಪ್ ಸುದ್ದಿಗಳು