November 14, 2020

ಡಿ.1ರಿಂದ ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ಕಾಲೇಜುಗಳ ತರಗತಿ ಪುನಾರಾರಂಭ

ಬೆಂಗಳೂರು : ರಾಜ್ಯದಲ್ಲಿ ಶಾಲಾ ಕಾಲೇಜು ಆರಂಭದ ಬಗ್ಗೆ ಸರಕಾರ ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ. ಆದರೆ, ವಿಶ್ವವಿದ್ಯಾಲಯಗಳು ಕಾಲೇಜುಗಳನ್ನು ಆರಂಭಿಸಲು ಸದ್ದಿಲ್ಲದೆ ಸಿದ್ಧತೆಗಳನ್ನು ನಡೆಸುತ್ತಿವೆ. ಈಗಾಗಲೇ ಮಂಗಳೂರು ವಿಶ್ವ ವಿದ್ಯಾಲಯ ಡಿ.1ರಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳನ್ನು ಆರಂಭಿಸುವುದಾಗಿ ಪ್ರಕಟಿಸಿದೆ. ಈ ನಡುವೆ, ಇದೀಗ ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ಕಾಲೇಜುಗಳನ್ನು ಡಿ.1ರಿಂದಲೇ ಆರಂಭಿಸಲಾಗುತ್ತದೆ ಎಂದು ಸಚಿವ ಡಾ. ಕೆ. ಸುಧಾಕರ್ ಘೋಷಿಸಿದ್ದಾರೆ.

ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ವೈದ್ಯಕೀಯ ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ ಮತ್ತು ಫಾರ್ಮಸಿ ಕಾಲೇಜುಗಳನ್ನು ಡಿ.1ರಿಂದ ಪುನಾರಂಭಿಸಲು ನಿರ್ಧರಿಸಲಾಗಿದೆ. ಈಗಾಗಲೇ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕಾಲೇಜುಗಳ ಆಡಳಿತ ಮಂಡಳಿಗಳನ್ನು ಹಾಗೂ ವಿದ್ಯಾರ್ಥಿಗಳನ್ನು ವಿನಂತಿಸುತ್ತೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಟಾಪ್ ಸುದ್ದಿಗಳು