ತಿರುವನಂತಪುರಂ ವಿಮಾನ ನಿಲ್ದಾಣ ಅದಾನಿ ಕಂಪೆನಿಗೆ ವಿರೋಧಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇರಳ ಸರಕಾರ

Prasthutha|

ತಿರುವನಂತಪುರಂ : ಕೇರಳದ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಗುಜರಾತ್ ಮೂಲದ ಉದ್ಯಮಿ ಅದಾನಿ ಸಮೂಹದ ಕಂಪೆನಿಗೆ ಗುತ್ತಿಗೆ ನೀಡಲು ಮುಂದಾಗಿರುವ ಕೇಂದ್ರ ಸರಕಾರದ ಕ್ರಮವನ್ನು ಪ್ರಶ್ನಿಸಿ, ಕೇರಳ ಸರಕಾರ ಮಂಗಳವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

- Advertisement -

ಕೇರಳದ ಹೈಕೋರ್ಟ್ ಕಳೆದ ತಿಂಗಳು ಅರ್ಜಿಯನ್ನು ತಿರಸ್ಕರಿಸಿದ ಬಳಿಕ, ಸುಪ್ರೀಂ ಕೋರ್ಟ್ ಮೊರೆ ಹೋಗಲು ಸರಕಾರ ಮುಂದಾಗಿತ್ತು. ಕೇಂದ್ರ ನಿರ್ಧಾರವನ್ನು ಪ್ರಶ್ನಿಸಲು ಸರ್ವಪಕ್ಷಗಳ ಸಭೆಯಲ್ಲಿ ನಿರ್ಧರಿಸಲಾಗಿತ್ತು.

ಈಗಾಗಲೇ ಕರ್ನಾಟಕದ ಮಂಗಳೂರು ವಿಮಾನ ನಿಲ್ದಾಣವನ್ನು ಅದಾನಿ ಗ್ರೂಪ್ ಗುತ್ತಿಗೆ ಪಡೆದಿರುವುದಕ್ಕೆ ಎಲ್ಲೆಡೆಯಿಂದ ಆಕ್ರೋಶ ವ್ಯಕ್ತವಾಗುತ್ತಿದೆ ಮತ್ತು ಪ್ರತಿಭಟನೆಗಳೂ ನಡೆಯುತ್ತಿವೆ.

Join Whatsapp