November 7, 2020

ಉಮರ್ ಖಾಲಿದ್ ವಿರುದ್ಧ UAPAಯಡಿ ವಿಚಾರಣೆಗೆ ಅನುಮತಿ ನೀಡಿದ ಕೇಜ್ರಿವಾಲ್ ಸರಕಾರ

ನವದೆಹಲಿ : ಕಳೆದ ಫೆಬ್ರವರಿಯಲ್ಲಿ ನಡೆದಿದ್ದ ಮುಸ್ಲಿಂ ವಿರೋಧಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಜೆಎನ್ ಯು ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ವಿರುದ್ಧ ಯುಎಪಿಎ ಕಾನೂನಿನಡಿ ತನಿಖೆಗೆ ದೆಹಲಿ ಸರಕಾರ ಅನುಮತಿ ನೀಡಿದೆ.

ಭಯೋತ್ಪಾದನಾ ತಡೆಗೆ ಸಂಬಂಧಿಸಿದ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ)ಯಡಿ ಖಾಲಿದ್ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಆಮ್ ಆದ್ಮಿ ಸರಕಾರ ಮತ್ತು ಕೇಂದ್ರ ಗೃಹ ಸಚಿವಾಲಯವು ಖಾಲಿದ್ ವಿರುದ್ಧ ಯುಎಪಿಎಯಡಿ ಕ್ರಮ ಕೈಗೊಳ್ಳಲು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ, ಪೊಲೀಸರು ಈಗ ಪ್ರಕರಣಕ್ಕೆ ಸಂಬಂಧಿಸಿ ಪೂರಕ ದೋಷಾರೋ ಪಟ್ಟಿಯಲ್ಲಿ ಖಾಲಿದ್ ಹೆಸರನ್ನೂ ಸೇರಿಸಲಿದ್ದಾರೆ ಎನ್ನಲಾಗಿದೆ.
ಸಿಎಂ ಅರವಿಂದ ಕೇಜ್ರಿವಾಲ್ ಸರಕಾರದ ನಿರ್ಧಾರವನ್ನು ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶೆ ಘೋಷ್ ಖಂಡಿಸಿದ್ದಾರೆ. ಇದು ‘ವಿಶ್ವಾಸದ್ರೋಹ’ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಟಾಪ್ ಸುದ್ದಿಗಳು

ವಿಶೇಷ ವರದಿ