ಹುಬ್ಬಳ್ಳಿ | ನಟಿ, ಮಾಜಿ ಸಚಿವೆ ಉಮಾಶ್ರೀಗೆ ಸೇರಿದ ಕಾರು ಅಪಘಾತ | ಇಬ್ಬರು ಸಾವು

Prasthutha|

ಹುಬ್ಬಳ್ಳಿ : ಮಾಜಿ ಸಚಿವೆ, ನಟಿ ಉಮಾಶ್ರೀ ಅವರಿಗೆ ಸೇರಿದ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

- Advertisement -

ಗದಗದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಇನ್ನೋವಾ ಕಾರು ಮತ್ತು ಹುಬ್ಬಳ್ಳಿಯಿಂದ ಗದಗದತ್ತ ಹೊರಟಿದ್ದ ಇನ್ನೊಂದು ಕಾರಿನ ನಡುವೆ ಶುಕ್ರವಾರ ರಾತ್ರಿ ಢಿಕ್ಕಿಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ ಮತ್ತು ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಪೊಲೀಸ್ ಮೂಲಗಳು ತಿಳಿಸಿರುವಂತೆ ಅಪಘಾತಕ್ಕೀಡಾದ ಕಾರು ಚಿತ್ರನಟಿ ಹಾಗೂ ಮಾಜಿ ಸಚಿವೆ ಉಮಾಶ್ರೀ ಅವರಿಗೆ ಸೇರಿದ್ದು ಎನ್ನಲಾಗಿದೆ.

ಉಮಾಶ್ರೀ ಅವರನ್ನು ಬಿಟ್ಟು ಕಾರು ಚಾಲಕ ತಮ್ಮೂರಿಗೆ ಹೊರಟಿದ್ದ. ಹುಬ್ಬಳ್ಳಿ ತಾಲ್ಲೂಕಿನ ಬಂಡಿವಾಡ ಸಮೀಪ ಅಪಘಾತ ನಡೆದಿದ್ದು, ಓವರ್‌ ಟೇಕ್‌ ಮಾಡುವ ಭರದಲ್ಲಿ ಎದುರಿಗೆ ಬಂದ ಕಾರುಗಳ ನಡುವೆ ಡಿಕ್ಕಿಯಾಗಿದೆ.

Join Whatsapp