ಗ್ರಾಮ ಪಂಚಾಯತ್ ಚುನಾವಣೆ ದಿನಾಂಕ ಘೋಷಣೆ | ಎರಡು ಹಂತದಲ್ಲಿ ಮತದಾನ

Prasthutha|

ಬೆಂಗಳೂರು : ರಾಜ್ಯ ಚುನಾವಣಾ ಆಯೋಗವು ಸೋಮವಾರ ಗ್ರಾಮ ಪಂಚಾಯಿತಿ ಚುನಾವಣಾ ದಿನಾಂಕವನ್ನು ಪ್ರಕಟಿಸಿದ್ದು, ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಇಂದಿನಿಂದಲೇ ನೀತಿಸಂಹಿತೆ ಜಾರಿಯಲ್ಲಿರಲಿದೆ.

- Advertisement -

ಮೊದಲ ಹಂತದ ಮತದಾನ ಡಿಸೆಂಬರ್​ 22ರಂದು ಹಾಗೂ ಎರಡನೇ ಹಂತದ ಚುನಾವಣೆ ಡಿ.27ಕ್ಕೆ ನಡೆಯಲಿದೆ. ಇಂದಿನಿಂದ ಜಾರಿಯಾಗಲಿರುವ ನೀತಿ ಸಂಹಿತೆ ಡಿ.31ರವರೆಗೂ ಜಾರಿಯಲ್ಲಿರುತ್ತದೆ.

ರಾಜ್ಯ ಚುನಾವಣಾ ಆಯೋಗ ಇಂದು ಬೆಳಗ್ಗೆ 11.30ಕ್ಕೆ ಗ್ರಾಮ ಪಂಚಾಯಿತಿ ಚುನಾವಣಾ ದಿನಾಂಕ ಪ್ರಕಟಿಸಿದೆ. ಈ ಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಎಲ್ಲ ಹೊಸ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ, ಉದ್ಘಾಟನೆ ಇನ್ನು ಮಾಡುವಂತಿಲ್ಲ.

- Advertisement -

ಸುಮಾರು 5,800 ಗ್ರಾಮ ಪಂಚಾಯಿತಿಗಳ 85,000 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ರಾಜಕೀಯ ಪಕ್ಷಗಳಿಗೆ ಸ್ಥಳೀಯ ಮಟ್ಟದಲ್ಲಿ ತಮ್ಮ ಪ್ರಭಾವವನ್ನು ಪ್ರದರ್ಶಿಸಲು ವೇದಿಕೆಯಾಗಲಿದೆ. ಗ್ರಾಮ ಪಂಚಾಯತ್ ಚುನಾವಣೆಗಳು ಪಕ್ಷಾತೀತವಾಗಿದ್ದರೂ, ಪಕ್ಷಗಳ ಪರೋಕ್ಷ ಹಿತಾಸಕ್ತಿ ಈ ಚುನಾವಣೆಯಲ್ಲಿರುತ್ತದೆ.

Join Whatsapp