ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇನೆ : ಎಚ್. ವಿಶ್ವನಾಥ್

Prasthutha|

ಬೆಂಗಳೂರು : ತಮ್ಮ ವಿರುದ್ಧದ ಹೈಕೋರ್ಟ್ ತೀರ್ಪಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದ್ದಾರೆ.  

- Advertisement -

ಸಚಿವ ಸ್ಥಾನದ ಆಸೆಯಿಂದ ಬಿಜೆಪಿ ಸೇರ್ಪಡೆಗೊಂಡಿದ್ದ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರಿಗೆ ಸಚಿವರಾಗುವ ಅರ್ಹತೆಯಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿರುವ ಬಗ್ಗೆ ವರದಿಯಾಗಿತ್ತು.

ಹೈಕೋರ್ಟ್ ನೀಡಿರುವ ತೀರ್ಪಿಗೆ ತಲೆ ಬಾಗುತ್ತೇನೆ. ಕಾನೂನಿನಲ್ಲಿ ಮೇಲ್ಮನವಿ ಅನ್ನೋದು ಇದೆ. ರಾಜ್ಯ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇನೆ. ಅಲ್ಲಿ ನ್ಯಾಯ ಸಿಗಬಹುದು ಎಂಬ ನಿರೀಕ್ಷೆಯಿದೆ ಎಂದು ವಿಶ್ವನಾಥ್ ತಿಳಿಸಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮಗೆ ಹೈಕೋರ್ಟ್ ತೀರ್ಪಿನ ಪ್ರತಿ ಸಿಕ್ಕಿಲ್ಲ. ಸಿಕ್ಕಿದ ನಂತರ ವಕೀಲರೊಂದಿಗೆ ಚರ್ಚಿಸುತ್ತೇನೆ ಎಂದು ಅವರು ಹೇಳಿದ್ದಾರೆ.

Join Whatsapp