November 5, 2020

ಲವ್ ಜಿಹಾದ್ ಹೆಸರಲ್ಲಿ ಮತಾಂತರ ಕಡಿವಾಣಕ್ಕೆ ಬಿಗಿ ಕ್ರಮ : ಯಡಿಯೂರಪ್ಪ

ಮಂಗಳೂರು : ಲವ್ ಜಿಹಾದ್ ಹೆಸರಿನಲ್ಲಿ ಮತಾಂತರ ನಡೆಯುತ್ತಿದ್ದು, ಇದರ ಕಡಿವಾಣಕ್ಕೆ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಅವರು ಮಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಯಾರು ಮಾಡುತ್ತಾರೋ, ಬಿಡುತ್ತಾರೋ ಗೊತ್ತಿಲ್ಲ. ಸಮಗ್ರವಾಗಿ ಚರ್ಚಿಸಿ ರಾಜ್ಯದಲ್ಲಿ ಇದಕ್ಕೆ ಬಿಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಭರವಸೆ ನೀಡಿದರು.

ಶಿರಾ ಮತ್ತು ಆರ್.ಆರ್. ನಗರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಇದರಿಂದಾಗಿಯೇ ಕಾಂಗ್ರೆಸ್ ನಾಯಕರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಚುನಾವಣಾ ಫಲಿತಾಂಶ ಕಾಂಗ್ರೆಸಿಗರಿಗೆ ಉತ್ತರ ಸಿಗಲಿದೆ ಎಂದು ಅವರು ಹೇಳಿದರು.

ಪಕ್ಷ ಸಂಘಟನೆಗೆ ದಕ್ಷಿಣ ಕನ್ನಡ ರಾಜ್ಯಕ್ಕೆ ಮಾದರಿ. ಇದೇ ಮಾದರಿಯಲ್ಲಿ ಪಕ್ಷ ಸಂಘಟಿಸುವ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ 140-150 ಸ್ಥಾನ ಗೆಲ್ಲುವಂತಾಗಲಿ. ಇದಕ್ಕೆ ನಳಿನ್ ಕುಮಾರ್ ನೇತೃತ್ವದಲ್ಲಿ ಎಲ್ಲರೂ ಅಗತ್ಯ ಸಹಕಾರ ನೀಡಬೇಕು ಎಂದು ಯಡಿಯೂರಪ್ಪ ತಿಳಿಸಿದರು.

ಟಾಪ್ ಸುದ್ದಿಗಳು

ವಿಶೇಷ ವರದಿ