ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ 10ಕೋಟಿ ದಂಡ ಕಟ್ಟಿದ ಶಶಿಕಲಾ

Prasthutha: November 19, 2020

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಹಾಯಕಿ ವಿ.ಕೆ ಶಶಿಕಲಾ 10 ಕೋಟಿ ರೂ ದಂಡ ಪಾವತಿಸಿದ್ದಾರೆ. ಆರ್ಥಿಕ ವಂಚನೆಯ ಆರೋಪದ ಮೇಲೆ ಜೈಲಿನಲ್ಲಿರುವ ಶಶಿಕಲಾ ಅವರು ಶೀಘ್ರದಲ್ಲೇ ಜಾಮೀನಿನ ಮೇಲೆ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ವಕೀಲ ಎನ್. ರಾಜಾ ಸೆಂತೂರ್ ಪಾಂಡ್ಯ ಹೇಳಿದ್ದಾರೆ. ಆದರೆ, ಎಐಎಡಿಎಂಕೆ ಶಶಿಕಲಾ ಬಗ್ಗೆ ತನ್ನ ನಿಲುವನ್ನು ಬದಲಾಯಿಸಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಇ ಪಳನಿಸ್ವಾಮಿ ಹೇಳಿದ್ದಾರೆ. ಜೈಲಿನಿಂದ ಬಿಡುಗಡೆಯಾಗಿ ಬರುವ ಶಶಿಕಲಾ ಮತ್ತು ಅವರ ಕುಟುಂಬಕ್ಕೆ ಪಕ್ಷ ಅಥವಾ ಸರ್ಕಾರದಲ್ಲಿ ಯಾವುದೇ ಸ್ಥಾನವಿರುವುದಿಲ್ಲ ಎಂದು ಪಳನಿಸ್ವಾಮಿ ಹೇಳಿದ್ದಾರೆ.

ಎಐಎಡಿಎಂಕೆ ನಾಯಕಿ ಮತ್ತು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಬಲಗೈ ಎಂದು ಕರೆಯಲ್ಪಡುವ ಶಶಿಕಲಾ ತಮಿಳುನಾಡು ರಾಜಕೀಯದ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರು. ಜಯಲಲಿತಾ ಅವರ ಮರಣದ ನಂತರ ಶಶಿಕಲಾ ಅವರು ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬರಲು ನಡೆಸಿದ ತಂತ್ರಗಳೆಲ್ಲಾ ವಿಫಲವಾಗಿತ್ತು. ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ಶಶಿಕಲಾ ಅವರನ್ನು 2017 ರಲ್ಲಿ ಬಂಧಿಸಲಾಗಿತ್ತು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ