ಅಪ್ಪ ಇನ್ನೂ ಬದುಕಿದ್ದಾರೆ; ಸುಳ್ಳು ಸುದ್ದಿ ಹಬ್ಬಿಸಬೇಡಿ | ಪ್ರಣವ್ ಮುಖರ್ಜಿ ಪುತ್ರನ ಸ್ಪಷ್ಟನೆ
Prasthutha: August 13, 2020

ನವದೆಹಲಿ : ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ನಿಧನರಾದರೆಂಬ ವದಂತಿ ವ್ಯಾಪಕವಾಗಿ ಹಬ್ಬಿದ್ದು, ಈ ಬಗ್ಗೆ ಅವರ ಮಗ ಅಭಿಜಿತ್ ಬ್ಯಾನರ್ಜಿ ಸ್ಪಷ್ಟನೆ ನೀಡಿದ್ದಾರೆ. #ripPranabMukherjee ಎಂಬ ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್ರೆಂಡ್ ಆಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅಭಿಜಿತ್ ಬ್ಯಾನರ್ಜಿ, ನಮ್ಮ ಅಪ್ಪ ಇನ್ನೂ ಬದುಕಿದ್ದಾರೆ ಎಂದಿದ್ದಾರೆ. ಸುಳ್ಳು ಸುದ್ದಿ ಹರಡಬೇಡಿ ಎಂದು ಮನವಿ ಮಾಡಿದ್ದಾರೆ.
ನನ್ನ ತಂದೆ ಪ್ರಣವ್ ಮುಖರ್ಜಿ ಇನ್ನೂ ಜೀವಂತವಾಗಿದ್ದಾರೆ ಮತ್ತು ಅವರ ಆರೋಗ್ಯ ಸ್ಥಿರವಾಗಿದೆ. ಹೆಸರಾಂತ ಪತ್ರಕರ್ತರು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುತ್ತಿರುವ ಊಹಾಪೋಹಗಳು ಮತ್ತು ಸುಳ್ಳು ಸುದ್ದಿಗಳು, ಭಾರತದಲ್ಲಿ ಮಾಧ್ಯಮಗಳು ಸುಳ್ಳು ಸುದ್ದಿಗಳ ಕಾರ್ಖಾನೆಯಾಗಿ ಮಾರ್ಪಟ್ಟಿದೆ ಎಂಬುದನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
