ಅಮೆರಿಕಾದ 46ನೇ ಅಧ್ಯಕ್ಷರಾಗಿ ಜೋ ಬೈಡೆನ್ | ಮುಖಭಂಗ ಅನುಭವಿಸಿದ ಟ್ರಂಪ್

Prasthutha|

ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡೆನ್ 284 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಅಮೆರಿಕಾದ 46ನೇ ಅಧ್ಯಕ್ಷರಾಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಡೊನಾಲ್ಡ್ ಟ್ರಂಪ್ ತೀವ್ರ ಮುಖಭಂಗ ಅನುಭವಿಸಿದ್ದಾರೆ.

- Advertisement -

ಇದೇ‌ ವೇಳೆ ಭಾರತೀಯ ಮೂಲದ
ಕಮಲಾ ಹ್ಯಾರಿಸ್ ಮೊದಲ ಮಹಿಳಾ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.

ಅಮೆರಿಕಾ ಅಧ್ಯಕ್ಷೀಯ ಚುನಾವಣೆಗೆ ಕಳೆದ ಮಂಗಳವಾರ ಮತದಾನ ನಡೆದಿದ್ದು, ಇಡೀ ವಿಶ್ವವೆ ಮುಂದಿನ ಅಧ್ಯಕ್ಷ ಯಾರು ಎಂಬುದನ್ನು ಕುತೂಹಲದಿಂದ ಎದುರು ನೋಡುತ್ತಿತ್ತು. ಇದೀಗ ಜೋ ಬೈಡೆನ್ ರವರ ಗೆಲುವು ಈ ಪ್ರಶ್ನೆಗೆ ತೆರೆ ಎಳೆದಿದೆ. ಡೆಮಾಕ್ರಟಿಕ್ ಪಕ್ಷದ ಜೋ
ಬಿಡೆನ್ ಈ ಹಿಂದೆ ಅಮೆರಿಕದ ಉಪಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.

Join Whatsapp