ಅರ್ನಾಬ್ ನನ್ನು ಬಿಡುಗಡೆಗೊಳಿಸಲು ಒತ್ತಾಯಿಸಿ ಬಿಜೆಪಿ ಶಾಸಕನ ಉಪವಾಸ ಸತ್ಯಾಗ್ರಹ

Prasthutha: November 5, 2020

ಅರ್ನಾಬ್ ಗೋಸ್ವಾಮಿಯನ್ನು ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿ ಬಿಜೆಪಿ ಶಾಸಕ ರಾಮ್ ಕದಮ್ ಉಪವಾಸ ಸತ್ಯಾಗ್ರಹಕ್ಕೆ ಸಿದ್ಧತೆ ನಡೆಸಿದ್ದಾರೆ. ಶುಕ್ರವಾರದಿಂದ ಮಹಾರಾಷ್ಟ್ರ ರಾಜ್ಯ ಸಚಿವಾಲಯದ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದೆಂದು ಶಾಸಕ ಹೇಳಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳಲು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡಿರುವುದಾಗಿ ಶಾಸಕ ಹೇಳಿದ್ದಾರೆ.

“ಅರ್ನಾಬ್ ಅವರ ಮನೆಯೊಳಗೆ ನುಗ್ಗಿ ಹಲ್ಲೆ ನಡೆಸಿ ಬಂಧಿಸಲಾಗಿದೆ. ಇದರ ಹಿಂದೆ 9 ಪೊಲೀಸರು ಇದ್ದಾರೆ. ಅವರನ್ನು ಅಮಾನತುಗೊಳಿಸಬೇಕು. ಪೊಲೀಸರನ್ನು ಯಾವಾಗಲೂ ಗೌರವಿಸುತ್ತೇನೆ. ಆದರೆ ಈ ಕ್ರಮ ಸ್ವೀಕರಾರ್ಹವಲ್ಲ” ಎಂದು ರಾಮ್ ಕದಮ್ ಹೇಳಿದ್ದಾರೆ.
ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್, ಸ್ಮೃತಿ ಇರಾನಿ ಮತ್ತು ಅಮಿತ್ ಶಾ ಅರ್ನಾಬ್ ಗೋಸ್ವಾಮಿಯ ಪರವಾಗಿ ನಿಂತಿದ್ದಾರೆ. ಬಂಧನಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಒಟ್ಟಾಗಿ ಪ್ರಜಾಪ್ರಭುತ್ವವನ್ನು ಮುಜುಗರಕ್ಕೀಡು ಮಾಡುತ್ತಿದೆ ಎಂದು ಹೇಳಿದ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ