ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸರಿಯಲ್ಲ : ಸಿದ್ಧರಾಮಯ್ಯ ಆಕ್ಷೇಪ

Prasthutha|

ಬೆಂಗಳೂರು: ರಾಜ್ಯಪಾಲರಿಗೆ ಆಡಳಿತದಲ್ಲಿ ಹಸ್ತಕ್ಷೇಪ ಮಾಡಲು ಅವಕಾಶವಿಲ್ಲವೆಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದ ಕೊರೋನಾ ಸ್ಥಿತಿಗತಿಗಳ ಕುರಿತಂತೆ ರಾಜ್ಯಪಾಲರ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದ ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸರಿಯಲ್ಲವೆಂದು ಹೇಳಿದ್ದಾರೆ.

- Advertisement -

ರಾಜ್ಯಪಾಲರು ಕರೆದ ಸಭೆಗೆ ಗೌರವದಿಂದ ಭಾಗಿಯಾಗಿದ್ದೇವೆ. ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪಕ್ಕೆ ರಾಜ್ಯಪಾಲರಿಗೆ ಅಧಿಕಾರವಿಲ್ಲ. ಅವರು ಸರ್ಕಾರಕ್ಕೆ ಈ ರೀತಿ ಸಭೆ ನಡೆಸಿ ಎಂದು ಸೂಚನೆ ನೀಡಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕೊರೋನಾ ಪಾಸಿಟಿವ್ ಬಂದಿದ್ದು ಅವರು ಶೀಘ್ರ ಚೇತರಿಕೆಗೆ ಹಾರೈಸಿದ ಸಿದ್ದರಾಮಯ್ಯ, ರಾಜ್ಯಪಾಲರು ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ಅವರು ಸಭೆ ಕರೆದಿರುವುದೇ ಸಂವಿಧಾನಬಾಹಿರ ಎಂದು ಹೇಳಿದ್ದಾರೆ.

- Advertisement -