July 24, 2020

ಆರ್.ಟಿ.ಇ: ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿ ಪರಿಷ್ಕರಣೆ

ಬೆಂಗಳೂರು: 2020-21ರ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಣದ ಹಕ್ಕು ಕಾಯ್ದೆ(ಆರ್‌ಟಿಇ) ಅಡಿಯಲ್ಲಿ ಶಾಲಾ ದಾಖಲಾತಿಯ ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ಪರಿಷ್ಕರಿಸಿದೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದವರಿಗೆ ವೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಜುಲೈ 29ರಂದು ನಡೆಯಲಿದೆ. ಜುಲೈ 30ರಿಂದ ಆಗಸ್ಟ್ 8ರ ವರೆಗೆ ಶಾಲೆಗಳಲ್ಲಿ ದಾಖಲಾತಿ ಮಾಡಿಕೊಳ್ಳಲಾಗುತ್ತದೆ. ವೊದಲ ಸುತ್ತಿನಲ್ಲಿ ಶಾಲೆಗಳಿಗೆ ದಾಖಲಾದ ಮಕ್ಕಳ ವಿವರವನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲಾಗುತ್ತದೆ.

ಎರಡನೇ ಸುತ್ತಿನ ಸೀಟು ಹಂಚಿಕೆಯು ಆಗಸ್ಟ್ 17ರಂದು ನಡೆಯಲಿದ್ದು, ದಾಖಲಾತಿ ಪ್ರಕ್ರಿಯೆ 18ರಿಂದ 25ರ ವರೆಗೆ ನಡೆಯಲಿದೆ. ಎರಡನೇ ಸುತ್ತಿನಲ್ಲಿ ದಾಖಲಾದ ವಿದ್ಯಾರ್ಥಿಗಳ ವಿವರಗಳನ್ನು ಇದೇ ಅವಧಿಯಲ್ಲಿ ತಂತ್ರಾಂಶದಲ್ಲಿ ದಾಖಲಿಸಲಾಗುವುದು ಎಂದು ಶಿಕ್ಷಣ ಇಲಾಖೆಯ ಪ್ರಕಟನೆ ತಿಳಿಸಿದೆ.

ಟಾಪ್ ಸುದ್ದಿಗಳು

ವಿಶೇಷ ವರದಿ