ಆಸ್ಪತ್ರೆಯ ಪಾರ್ಕಿಂಗ್ ಪ್ರದೇಶದಲ್ಲಿ ಮಹಿಳೆಯ ಸಾಮೂಹಿಕ ಅತ್ಯಾಚಾರ | ಭದ್ರತಾ ಸಿಬ್ಬಂದಿ ಸೇರಿದಂತೆ ಮೂವರ ಬಂಧನ

Prasthutha|


ಹೊಸದಿಲ್ಲಿ : ಆಸ್ಪತ್ರೆಯೊಂದರ ಪಾರ್ಕಿಂಗ್ ಪ್ರದೇಶದಲ್ಲಿ 30 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ರೋಹಿಣಿಯಲ್ಲಿರುವ ಬಾಬಾ ಸಾಹೇಬ್ ಭೀಮ್ ರಾವ್ ಅಂಬೇಡ್ಕರ್ ಆಸ್ಪತ್ರೆಯ ಪಾರ್ಕಿಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆಸ್ಪತ್ರೆಯ ಭದ್ರತಾ ಸಿಬ್ಬಂದಿ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಯನ್ನು ನೋಡಲು ಮಹಿಳೆ ಆಸ್ಪತ್ರೆಗೆ ಹೋಗಿದ್ದರು. ಈ ವೇಳೆ ಘಟನೆ ನಡೆದಿದೆ.

- Advertisement -


ಸೆಕ್ಯುರಿಟಿ ಗಾರ್ಡ್ ಮತ್ತು ಇಬ್ಬರು ಮಾಜಿ ಸೆಕ್ಯುರಿಟಿ ಗಾರ್ಡ್ ಗಳು ತನ್ನನ್ನು ಪಾರ್ಕಿಂಗ್ ಪ್ರದೇಶದ ನಿರ್ಜನ ಸ್ಥಳಕ್ಕೆ ಕರೆದೊಯ್ದು, ಅಲ್ಲಿ ಅತ್ಯಾಚಾರ ನಡೆಸಿದ್ದಾರೆ ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ. ಮಹಿಳೆಯ ದೂರಿನ ಆಧಾರದ ಮೇಲೆ ಅತ್ಯಾಚಾರ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮನೀಶ್(22), ಪ್ರವೀಣ್ ತಿವಾರಿ(24), ಕನ್ವರ್ ಪಾಲ್(33) ಬಂಧಿತರು.

Join Whatsapp