ಇಲಿ ಪಾಷಾಣ ತಿಂದು ಮಗು ಮೃತ್ಯು

Prasthutha: June 20, 2021

ಉಪ್ಪಿನಂಗಡಿ: ಇಲಿಗೆ ಇಟ್ಟಿದ್ದ ಪಾಷಾಣ ತಿಂದು ಮಗುವೊಂದು ಮೃತಪಟ್ಟ ದಾರುಣ ಘಟನೆಯೊಂದು ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಕೆಮ್ಮಾರ ಎಂಬಲ್ಲಿ ನಡೆದಿದೆ.


ಭಾರತೀಯ ಸೇನೆಯಲ್ಲಿದ್ದ ಸೈಜು ಮತ್ತು ದೀಪ್ತಿ ದಂಪತಿಯ ಪುತ್ರಿ ಎರಡೂವರೆ ವರ್ಷದ ಶ್ರೇಯಾ ಮೃತಪಟ್ಟ ಮಗು.


  ಜೂ.19ರಂದು ಬೆಳಿಗ್ಗೆ ಮಗುವಿನ ತಂದೆ, ತಾಯಿ ನಾಯಿ ಗೂಡಿನ ಮೇಲಿದ್ದ ಪಿವಿಎಸ್ ಪೈಪು ಸೇರಿದಂತೆ ಇನ್ನಿತರ ಸಾಮಾಗ್ರಿಗಳನ್ನು ಸ್ವಚ್ಛಗೊಳಿಸಿದ್ದಾರೆ. ಈ ವೇಳೆ ಎರಡು-ಮೂರು ತಿಂಗಳ ಹಿಂದೆ ತಂದಿದ್ದ ಇಲಿ ಪಾಷಾಣದ ಟ್ಯೂಬ್ ಸಹ ಸಿಕ್ಕಿದೆ. ಮನೆಯವರು ಸ್ವಚ್ಛತಾ ಕಾರ್ಯ ಮುಂದುವರಿಸಿದ್ದು, ಮಗು ಆಟವಾಡುತ್ತ ಬಂದು ಇಲಿ ಪಾಷಾಣ ತಿಂದಿದೆ.

ಮಧ್ಯಾಹ್ನದ ವೇಳೆ ಮಗುವಿಗೆ ವಾಂತಿ ಆರಂಭಗೊಂಡಿದ್ದು ತಕ್ಷಣ ಉಪ್ಪಿನಂಗಡಿಯ ಆಸ್ಪತ್ರೆಗೆ ಕರೆತಂದು ಬಳಿಕ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗು ತೀವ್ರ ಅಸ್ವಸ್ಥಗೊಂಡಿದ್ದ ಹಿನ್ನೆಲೆಯಲ್ಲಿ ಜೂ.20ರಂದು ಬೆಳಿಗ್ಗೆ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ತಪಾಸಣೆ ವೇಳೆ ಮಗು ಮೃತಪಟ್ಟಿದೆ.  

ಘಟನೆಯ ವೇಳೆ ಸೈಜು ಮತ್ತು ದೀಪ್ತಿ ದಂಪತಿಯ ಮತ್ತೊಂದು ಮಗ ಸಿಯೋನ್‌ ಹೊರಗೆ ಆಟವಾಡುತ್ತಿದ್ದ ಎಂದು ತಿಳಿದುಬಂದಿದೆ.ಮಗುವನ್ನು ಕಳೆದುಕೊಂಡ ದಂಪತಿಯ ಆಕ್ರಂದನ ಮುಗಿಲು ಮುಟ್ಟಿತ್ತು.  ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ