ಇಸ್ರೇಲ್ ಜೊತೆಗೆ ಮೈತ್ರಿಗೆ ಸುಡಾನ್ ಒಪ್ಪಿಗೆ : ಟ್ರಂಪ್ ಹೇಳಿಕೆ

Prasthutha|

ವಾಶಿಂಗ್ಟನ್ : ಸುಡಾನ್ ಮತ್ತು ಇಸ್ರೇಲ್ ನಡುವಿನ ಸಂಬಂಧಗಳನ್ನು ಸಹಜ ಸ್ಥಿತಿಗೆ ತರಲು ಉಭಯ ರಾಷ್ಟ್ರಗಳು ಸಮ್ಮತಿಸಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಈ ಬೆಳವಣಿಗೆಯನ್ನು ಖಂಡಿಸಿರುವ ಪೆಲೆಸ್ತೀನಿಯನ್ನರು, ‘ಬೆನ್ನಿಗೆ ಮತ್ತೊಂದು ಹೊಸ ಇರಿತ’’ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಸುಡಾನ್ ಪ್ರಧಾನಿ ಅಬ್ದಲ್ಲಾ ಹಮ್ದಕ್ ಜೊತೆ ದೂರವಾಣಿ ಮಾತುಕತೆ ನಡೆಸಿದ ಟ್ರಂಪ್, ದೂರವಾಣಿಯಲ್ಲೇ ಇಬ್ಬರು ಪ್ರಧಾನಿಗಳು ಮತ್ತು ಪರಿವರ್ತನಾ ಮಂಡಳಿ ಮುಖ್ಯಸ್ಥ ಅಬ್ದೆಲ್ ಫತ್ತಾ ಅಲ್-ಬುರ್ಹಾನ್ ನಡುವಿನ ಒಪ್ಪಂದಕ್ಕೆ ಟ್ರಂಪ್ ಒಪ್ಪಿಸಿದರು ಎಂದು ಅಮೆರಿಕ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

“ಸುಡಾನ್ ಮತ್ತು ಇಸ್ರೇಲ್ ನಡುವಿನ ಸಂಬಂಧಗಳನ್ನು ಸಹಜ ಸ್ಥಿತಿಗೆ ತರಲು ಮತ್ತು ತಮ್ಮ ರಾಷ್ಟ್ರಗಳ ನಡುವಿನ ವೈರತ್ವ ತೊರೆಯಲು ನಾಯಕರು ಒಪ್ಪಿಕೊಂಡಿದ್ದಾರೆ’’ ಎಂದು ಮೂರೂ ರಾಷ್ಟ್ರಗಳ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ. ಮುಂದಿನ ದಿನಗಳಲ್ಲಿ ಪೆಲೆಸ್ತೀನಿಯನ್ನರು ಮತ್ತು ಸೌದಿ ಅರೆಬಿಯಾ ಸೇರಿದಂತೆ ಇತರ ರಾಷ್ಟ್ರಗಳೂ ಇಸ್ರೇಲ್ ಜೊತೆಗಿನ ಮೈತ್ರಿ ಸಹಜ ಸ್ಥಿತಿಗೆ ತರಲಿವೆ ಎಂಬ ನಿರೀಕ್ಷೆಯಿದೆ ಎಂದೂ ಟ್ರಂಪ್ ಭರವಸೆ ವ್ಯಕ್ತಪಡಿಸಿದ್ದಾರೆ.

ನ.17ರಿಂದ ಕಾಲೇಜು ಆರಂಭಿಸುವುದಾಗಿ ಸರಕಾರ ಘೋಷಿಸಿದೆ. ಈ ಬಗ್ಗೆ ಪರ-ವಿರೋಧ ಹೇಳಿಕೆಗಳು ವ್ಯಕ್ತವಾಗುತ್ತಿವೆ. ಕೋವಿಡ್ – 19 ಪ್ರಕರಣಗಳು ಇನ್ನೂ ಸಾಕಷ್ಟು ದೊಡ್ಡ ಪ್ರಮಾಣದಲ್ಲಿರುವಾಗ ಕಾಲೇಜು ಆರಂಭಿಸಲು ಸರಕಾರ ನಿರ್ಧಾರ ಕೈಗೊಂಡಿರುವುದು ಸರಿಯೇ? ತಪ್ಪೇ? ಎಂಬ ಬಗ್ಗೆ ‘ಪ್ರಸ್ತುತ’ ಜನಾಭಿಮತ ಸಂಗ್ರಹಿಸುತ್ತಿದೆ. ಈ ಬಗ್ಗೆ ನಿಮ್ಮ ನಿಲುವನ್ನು ‘ಪ್ರಸ್ತುತ’ ಫೇಸ್ ಬುಕ್ ಪೇಜ್ ನಲ್ಲಿ ವ್ಯಕ್ತಪಡಿಸಿ.

https://www.facebook.com/2171161852895947/posts/3694124020599715/

- Advertisement -