ಉಡುಪಿ| ‘ಲವ್ ಜಿಹಾದ್’ ವಿರುದ್ಧ ಕರ್ನಾಟಕ ಕಠಿಣ ಕ್ರಮ ಕೈಗೊಳ್ಳಲಿದೆ| ನಳಿನ್ ಕುಮಾರ್

Prasthutha: November 27, 2020

ಹೆಚ್ಚುತ್ತಿರುವ ಲವ್ ಜಿಹಾದ್ ವಿರುದ್ಧ ರಾಜ್ಯದಲ್ಲೂ ಕಠಿಣ ಕಾನೂನು ಕ್ರಮ ಜಾರಿಗೊಳಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಮಣಿಪಾಲದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ‌ ಅವರು, ಇಂತಹ ತಂತ್ರಗಳ ವಿರುದ್ಧ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಸಂಪುಟ ಶೀಘ್ರವೇ ತೀರ್ಮಾನ ಕೈಗೊಳ್ಳಲಿದೆ ಎಂದರು.

” ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯನ್ನು ನಾವೆಲ್ಲ ಗಂಭೀರತೆಯಿಂದ ತೆಗೆದುಕೊಂಡಿದ್ದೇವೆ. ಪೇಜ್ ಪ್ರಮುಖ್ ನಿಯೋಜನೆ, ಸಂಘಟನಾತ್ಮಕ ಗೆಲುವಿಗೆ ಪಂಚರತ್ನ ಸಮಿತಿ ಸಹಿತ ಪ್ರತಿ ಜಿಲ್ಲೆಯಲ್ಲೂ ವಾರ್ ರೂಂ, ಕಾಲ್ ಸೆಂಟರ್, ಕುಟುಂಬ ಮಿಲನದಂತಹ ಪಂಚಸೂತ್ರ ಅಳವಡಿಸಲಾಗಿದೆ ಎಂದು ಹೇಳಿದ್ದಾರೆ.

ಮಂಗಳೂರಿನ ರಸ್ತೆಯೊಂದರಲ್ಲಿ ಕಂಡು ಬಂದ ರಾಷ್ಟ್ರ ವಿರೋಧಿ ಘೋಷಣೆ, ಬರಹ ಕುರಿತಂತೆ ಮಾತನಾಡಿದ ಅವರು, ಅದನ್ನು ಯಾರೇ ಹಾಕಿದ್ದರೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ, ಸಂಸದೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕೈ, ಕೋಲಾರ ಸಂಸದ ಮುನಿಸ್ವಾಮಿ, ಗೀತಾ ವಿವೇಕಾನಂದ, ಉದಯ ಕುಮಾರ್ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್, ಲಾಲಾಜಿ ಆರ್. ಮೆಂಡನ್, ಕೆ. ರಘುಪತಿ ಭಟ್, ಮಟ್ಟಾರು ರತ್ನಾಕರ ಹೆಗ್ಡೆ, ದಿನಕರ ಬಾಬು ಮತ್ತಿತರರು ಉಪಸ್ಥಿತರಿದ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ