ಉತ್ತರಪ್ರದೇಶದಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ : ದಲಿತ ಮಹಿಳೆಯ ಮೇಲೆ ನಾಲ್ವರ ತಂಡದಿಂದ ಆಕ್ರಮಣ

Prasthutha|

ಹಥ್ರಾಸ್ ಘಟನೆಯ ಪ್ರತಿಭಟನೆ ನಡೆಯುತ್ತಿರುವಾಗಲೇ ಉತ್ತರಪ್ರದೇಶದಲ್ಲಿ 44 ವರ್ಷದ ದಲಿತ ಮಹಿಳೆಯ ಮೇಲೆ ಮತ್ತೊಂದು ಸಾಮೂಹಿಕ ಅತ್ಯಾಚಾರ ನಡೆದಿದೆ. ಮಹಿಳೆಯ ಮೇಲೆ ನಾಲ್ಕು ಮಂದಿ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದಾರೆ. ಉತ್ತರಪ್ರದೇಶದ ಭಾದೋಹಿ ಜಿಲ್ಲೆಯ ಗ್ಯಾನ್ ಪುರದಲ್ಲಿ ಈ ಘಟನೆ ನಡೆದಿದೆ. ಮಹಿಳೆಯ ಪತಿಯ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಪಿ ರಾಮ್ ಬಾದನ್ ಸಿಂಗ್ ಹೇಳಿದ್ದಾರೆ.

ಮಹಿಳೆ ಬ್ಯಾಂಕಿನಿಂದ ಹಣವನ್ನು ಹಿಂಪಡೆದು ಹಿಂದಿರುಗುತ್ತಿದ್ದಳು. ಮಹಿಳೆಯನ್ನು ಮನೆಗೆ ಕರೆದೊಯ್ಯುವ ನೆಪದಲ್ಲಿ ಪತಿಯ ಸ್ನೇಹಿತರು ವಾಹನದಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ಎಸ್ಪಿ ಹೇಳಿದ್ದಾರೆ. ಗ್ಯಾನ್ ಪುರ್ ಪೊಲೀಸ್ ಸ್ಟೇಷನ್ ನಲ್ಲಿ ನಾಲ್ವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಇಬ್ಬರ ಹುಡುಕಾಟ ಮುಂದುವರೆದಿದೆ. ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವುದಾಗಿ ಎಸ್ಪಿ ತಿಳಿಸಿದ್ದಾರೆ. 

- Advertisement -

ಸರಕಾರ ಮತ್ತು ಪೊಲೀಸರು ಅಪರಾಧಿಗಳನ್ನು ರಕ್ಷಿಸುತ್ತಿರುವುದರಿಂದ ಉತ್ತರಪ್ರದೇಶದಲ್ಲಿ ಮಹಿಳೆಯರು ಮತ್ತು ದಲಿತರ ಮೇಲಿನ ದೌರ್ಜನ್ಯ ಮುಂದುವರಿದಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

- Advertisement -