ಉತ್ತರ ಪ್ರದೇಶದಲ್ಲೊಂದು ಕಥುವಾ!

Prasthutha|

ಬಾಲಕಿಯ ಭೀಕರ ಅತ್ಯಾಚಾರ | ಕಣ್ಣು ಕಿತ್ತು, ನಾಲಿಗೆ ಕತ್ತರಿಸಿ ಹತ್ಯೆ

- Advertisement -

ಲಕ್ನೋ : ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಕ್ರಿಮಿನಲ್ ಗಳಿಗೆ ಕಾನೂನಿನ ಭಯವೇ ಇಲ್ಲವೆಂಬ ಆರೋಪಕ್ಕೆ ಮತ್ತೊಂದು ಭೀಕರ ಘಟನೆ ಸಾಕ್ಷಿಯಾಗಿದೆ. ರಾಜ್ಯದ ಲಖೀಮ್ ಪುರ ಖೇರಿ ಜಿಲ್ಲೆಯಲ್ಲಿ 13 ವರ್ಷದ ಬಾಲಕಿಯೊಬ್ಬಳನ್ನು ದುಷ್ಕರ್ಮಿಗಳ ಗುಂಪೊಂದು ಸಾಮೂಹಿಕ ಅತ್ಯಾಚಾರ ನಡೆಸಿ, ಉಸಿರುಗಟ್ಟಿಸಿ ಸಾಯಿಸಿದ್ದಲ್ಲದೆ, ಕಣ್ಣು ಕಿತ್ತು, ನಾಲಿಗೆ ಕತ್ತರಿಸಿದ ಅಮಾನವೀಯ ಘಟನೆ ನಡೆದಿದೆ.

ಬಾಲಕಿಯ ಶವ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದೆ. ಶುಕ್ರವಾರ ಸಂಜೆ ಬಾಲಕಿ ನಾಪತ್ತೆಯಾಗಿದ್ದು, ಶನಿವಾರ ಆಕೆಯ ಶವ ಊರ ಹೊರಗಿನ ಕಬ್ಬಿನ ಗದ್ದೆಯಲ್ಲಿ ಸಿಕ್ಕಿದೆ. ಶವವು ಸಂಪೂರ್ಣ ವಿವಸ್ತ್ರವಾಗಿದ್ದಲ್ಲದೆ ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ಧೃಡಪಟ್ಟಿದೆ. ಆಕೆಯ ಬಟ್ಟೆಯಿಂದಲೇ ಆಕೆಯನ್ನು ಉಸಿರುಗಟ್ಟಿಸಿ ಸಾಯಿಸಲಾಗಿದೆ. ಅಲ್ಲದೆ ಕಣ್ಣು ಕೀಳಲಾಗಿದೆ ಮತ್ತು ನಾಲಿಗೆ ಕತ್ತರಿಸಿ ವಿಕೃತವಾಗಿ ಹತ್ಯೆ ಮಾಡಲಾಗಿದೆ.

- Advertisement -

ಬಾಲಕಿಯ ತಂದೆ ಈ ಕುರಿತು ದೂರು ದಾಖಲಿಸಿದ್ದು, ಮೂವರು ಆರೋಪಿಗಳ ಮೇಲೆ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ಘಟನೆ ಕುರಿತಂತೆ ಇಡೀ ದೇಶವೇ ಬೆಚ್ಚಿಬಿದ್ದಿದ್ದು ಅಪರಾಧಿಗಳಿಗೆ ಮರಣ ದಂಡನೆ ವಿಧಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಕ್ರಿಮಿನಲ್ ಗಳು ಅಟ್ಟಹಾಸ ಮೆರೆಯುತ್ತಿರುವುದು ದಿನ ನಿತ್ಯ ವರದಿಯಾಗುತ್ತಿದೆ. ಕೆಲವು ದಿನಗಳ ಹಿಂದೆ ವಿಕಾಸ್ ದುಬೆ ಎಂಬ ಭಯೋತ್ಪಾದಕ ಹಿರಿಯ ಪೊಲೀಸ್ ಅಧಿಕಾರಿ ಸೇರಿದಂತೆ ಎಂಟು ಮಂದಿ ಪೊಲೀಸ್ ಸಿಬ್ಬಂದಿ ಹತ್ಯೆ ಮಾಡಿದ್ದ ಘಟನೆ ನಡೆದಿತ್ತು. ದೇಶಾದ್ಯಂತ ಒತ್ತಡ ಬಂದ ಬಳಿಕ ಆತನನ್ನು ಬಂಧಿಸಿದರು,ನಂತರ ಅವನ ಸಂಶಯಾಸ್ಪದ ಸಾವು ಸಂಭವಿಸಿತು.

Join Whatsapp