ಉಳ್ಳಾಲ ಪಾಕ್ ಗೆ ಹೋಲಿಕೆ | ಕಲ್ಲಡ್ಕ ಪ್ರಭಾಕರ್ ಭಟ್ ಬಂಧನಕ್ಕೆ ಆಗ್ರಹಿಸಿ SDPI ಪ್ರತಿಭಟನೆ

Prasthutha|

ಮಂಗಳೂರು : ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಕೆ ಮಾಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್ ಬಂಧನಕ್ಕೆ ಒತ್ತಾಯಿಸಿ ಎಸ್ ಡಿಪಿಐ ವತಿಯಿಂದ ಪ್ರತಿಭಟನೆ ನಡೆದಿದೆ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವಂತೆ ಪ್ರತಿಭಟನಕಾರರು ಒತ್ತಾಯಿಸಿದ್ದಾರೆ.

ನ.1ರಂದು ಕೇಶವ ಶಿಶು ಮಂದಿರ ವತಿಯಿಂದ ನಡೆದ ಸಭೆಯಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಕೆ ಮಾಡಿದ್ದುದನ್ನು ಎಸ್ ಡಿಪಿಐ ಮುಖಂಡರು ಖಂಡಿಸಿದರು.

- Advertisement -

ಹಲವಾರು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರು ಶಾಂತಿ, ಸಾಮರಸ್ಯದಿಂದ ಜೀವನ ನಡೆಸುತ್ತಿದ್ದಾರೆ. ಆದರೆ, ಅದನ್ನು ಸಹಿಸಲಾಗದ ಆರೆಸ್ಸೆಸ್ ಮುಖಂಡರು ಕೋಮು ಗಲಭೆ ನಡೆಸಲು ಹವಣಿಸುತ್ತಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದರು.

ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ತಕ್ಷಣವೇ ದೂರು ದಾಖಲಿಸಿ, ಬಂಧಿಸಬೇಕು ಎಂದು ಆಗ್ರಹಿಸಲಾಯಿತು. ವಿಷಯಕ್ಕೆ ಸಂಬಂಧಿಸಿ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

- Advertisement -