ಉಳ್ಳಾಲ ಸೋಮೇಶ್ವರ ದೇವಸ್ಥಾನದಲ್ಲಿ ಆದೇಶ ಉಲ್ಲಂಘಿಸಿ ಬ್ರಹ್ಮಕಲಶೋತ್ಸವ : ಅಸಿಸ್ಟಂಟ್ ಕಮಿಷನರ್ ನೇತೃತ್ವದಲ್ಲಿ ದಾಳಿ !

Prasthutha: April 26, 2021

ಮಂಗಳೂರು : ಸರಕಾರದ ಆದೇಶವನ್ನು ಉಲ್ಲಂಘಿಸಿ ಉಲ್ಳಾಲದ ಸೋಮೇಶ್ವರ ದೆವಸ್ಥಾನ ಆಡಳಿತ ಸಮಿತಿಯು ನಡೆಸಿದ ಬ್ರಹ್ಮ ಕಲಶೋತ್ಸವಕ್ಕೆ ಕಂದಾಯ ಇಲಾಖೆ ಮಂಗಳೂರು ಉಪ ವಿಭಾಗದ ಎಸಿ ಮದನ್ ಮೋಹನ್ ದಾಳಿ ನಡೆಸಿ ಕಾರ್ಯಕ್ರಮ ನಡೆಸದಂತೆ ಸೂಚಿಸಿದ ಘಟನೆ ನಡೆದಿದೆ.

ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ನೂತನ ರಥ ಮತ್ತು ಹೊರೆ ಕಾಣಿಕೆ ಮೆರವಣಿಗೆಯಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಮಂಗಳೂರು ತಹಶೀಲ್ದಾರ್ ನೀಡಿದ್ದ ನೋಟೀಸನ್ನು ಕೂಡ ಕ್ಯಾರೇ ಅನ್ನದೆ ದೇವಸ್ಥಾನದ ಡಳಿತ ಸಮಿತಿಯು ಮೆರವಣಿಗೆ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 269ರ ಅಡಿಯಲ್ಲಿ ಪ್ರಕರನ ಕೂಡ ದಾಖಲಾಗಿತ್ತು ಎನ್ನಲಾಗಿದೆ.

ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿರುವ ನಡುವೆಯೂ ಅಪಾರ ಜನರನ್ನು ಸೇರಿಸಿ ನಡೆಸುತ್ತಿರುವ ಬ್ರಹ್ಮ ಕಲಶೋತ್ಸವಕ್ಕೆ ಎಸಿ ಮದನ್ ಅವರು ದಾಳಿ ನಡೆಸಿ ಕಾರ್ಯಕ್ರಮ ನಡೆಸದಂತೆ ಸೂಚಿಸಿದ್ದಾರೆ.

ದಾಳಿಯ ಸಂದರ್ಭ ಸೋಮೇಶ್ವರ ಗ್ರಾಮ ಕರಣಿಕರಾದ ಲಾವಣ್ಯ, ಮುಖ್ಯಾಧಿಕಾರಿ ವಾಣಿ ಆಳ್ವ ಸೇರಿದಂತೆ ಮತ್ತಿತರರು ಇದ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!