ಉ.ಪ್ರ. | ಬಿಜೆಪಿ ಗೋರಕ್ಷಾ ಸಮಿತಿ ಸ್ಟಿಕ್ಕರ್ ಅಂಟಿಸಿದ್ದ ಕಾರಿನಲ್ಲಿ ಮತ್ತೊಬ್ಬ ಬಾಲಕಿಯ ಅತ್ಯಾಚಾರ | ಆರೋಪಿಯ ಬಂಧನ

Prasthutha: October 19, 2020

ಲಖನೌ : ಉತ್ತರ ಪ್ರದೇಶ ಈಗ ಅಕ್ಷರಶಃ ಮಹಿಳೆಯರಿಗೆ ಸುರಕ್ಷಿತವಲ್ಲದ ರಾಜ್ಯವೆಂಬಂತೆ ಭಾಸವಾಗುತ್ತಿದೆ. ಇದೀಗ, ಮೀರತ್ ನಲ್ಲಿ ಮತ್ತೋರ್ವ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ವರದಿಯಾಗಿದೆ. ಘಟನೆಗೆ ಸಂಬಂಧಿಸಿ 20ರ ಹರೆಯದ ಯುವಕನನ್ನು ಬಂಧಿಸಲಾಗಿದೆ. ಬಿಜೆಪಿ ಗೋರಕ್ಷಾ ಸಮಿತಿಯ ಸ್ಟಿಕ್ಕರ್ ಹಚ್ಚಲ್ಪಟ್ಟಿದ್ದ ಕಾರಿನಲ್ಲಿ ಅತ್ಯಾಚಾರ ನಡೆದಿದೆ ಎನ್ನಲಾಗಿದ್ದು, ಬಿಜೆಪಿಗೂ ಆರೋಪಿಗೂ ಯಾವುದೇ ಸಂಬಂಧವಿಲ್ಲ ಎಂದು ಪಕ್ಷದ ಮುಖ್ಯಸ್ಥರು ಸ್ಪಷ್ಟಪಡಿಸಿದ್ದಾರೆ

ಆರೋಪಿ ಪುಲಕಿತ್ ಸೈನಿ ಬಿಜೆಪಿ ಗೋರಕ್ಷಾ ಸಮಿತಿ ಸ್ಟಿಕ್ಕರ್ ಉಳ್ಳ ಕಾರಿನಲ್ಲಿ ಅತ್ಯಾಚಾರ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಪಕ್ಷಕ್ಕೂ ಆರೋಪಿಗೂ ಯಾವುದೇ ಸಂಬಂಧವಿಲ್ಲ ಎಂದು ಮೀರತ್ ಬಿಜೆಪಿ ಜಿಲ್ಲಾಧ್ಯಕ್ಷ ಮುಕೇಶ್ ಸಿಂಘಾಲ್ ಹೇಳಿದ್ದಾರೆ. ಆರೋಪಿಯು ವಂಚನೆಯಿಂದ ತನ್ನ ಕಾರಿನಲ್ಲಿ ಸ್ಟಿಕ್ಕರ್ ಹಾಕಿಕೊಂಡಿದ್ದ ಎಂದು ಅವರು ಹೇಳಿದ್ದಾರೆ.
ಆರೋಪಿ ಮತ್ತು ಬಾಲಕಿ ಒಂದೇ ಕಾಲೇಜು ಮೈದಾನದಲ್ಲಿ ಕರಾಟೆ ಕಲಿಯಲು ಹೋಗುತ್ತಿದ್ದರು. ಕಳೆದ ಶುಕ್ರವಾರ ಬಾಲಕಿಯನ್ನು ಮನವೊಲಿಸಿ, ತನ್ನ ಕಾರಿನಲ್ಲಿ ಪುಲಕಿತ್ ಕರೆದೊಯ್ದಿದ್ದ. ಈ ವೇಳೆ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆತ ಅತ್ಯಾಚಾರ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಬಾಲಕಿ ಶನಿವಾರ ಮನೆಯವರಿಗೆ ತಿಳಿಸಿದ್ದು, ಅವರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಾಲಕಿ ಅನಾರೋಗ್ಯಕ್ಕಳಗಾದ ಹಿನ್ನೆಲೆಯಲ್ಲಿ ವಿಷಯ ಬೆಳಕಿಗೆ ಬಂದಿದೆ. ಆರೋಪಿಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಮತ್ತು ಶನಿವಾರ ರಾತ್ರಿ ಬಂಧಿಸಲಾಗಿದೆ.

ಹಥ್ರಾಸ್ ಅತ್ಯಾಚಾರ ಪ್ರಕರಣದ ಬಳಿಕ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ದೇಶಾದ್ಯಂತ ಕಳವಳ ವ್ಯಕ್ತವಾಗಿದೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರಕಾರದ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ