ಉ.ಪ್ರ. | ಮತ್ತೊಬ್ಬ ಯುವತಿಯ ಸಾಮೂಹಿಕ ಅತ್ಯಾಚಾರ, ಕೊಲೆ

Prasthutha|

ಲಖನೌ : ಉತ್ತರ ಪ್ರದೇಶ ಬಾರಾಬಂಕಿ ಜಿಲ್ಲೆಯಲ್ಲಿ ಮತ್ತೊಂದು ಹದಿ ಹರೆಯದ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ನಡೆದಿದೆ. ತನ್ನನ್ನು ಭೇಟಿಯಾಗುತ್ತಿಲ್ಲ ಎಂದು ಆಕೆಯ ಪ್ರಿಯಕರನೇ, ತನ್ನ ಸಹಚರನೊಂದಿಗೆ ಸೇರಿಕೊಂಡು ಅತ್ಯಾಚಾರ ಮತ್ತು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಯುವತಿಯ ಮನೆಯಲ್ಲಿ ಆಕೆಯ ಪ್ರೀತಿಗೆ ಒಪ್ಪಿಗೆ ಇರಲಿಲ್ಲ. 17 ವರ್ಷದ ಆಕೆಗೆ ತನ್ನ ಪ್ರಿಯಕರನನ್ನು ಭೇಟಿಯಾಗಲು ನಿರ್ಬಂಧಿಸಲಾಗಿತ್ತು. ಹೀಗಾಗಿ ಆಕೆ ಆತನನ್ನು ಭೇಟಿಯಾಗಲು ಹೋಗುತ್ತಿರಲಿಲ್ಲ ಎನ್ನಲಾಗಿದೆ.

ಘಟನೆಯ ಬಳಿಕ ಪೊಲೀಸರು, ಆರೋಪಿಯ ವಿಚಾರಣೆ ನಡೆಸಿದ್ದು, ಆತ ತಪ್ಪೊಪ್ಪಿಕೊಂಡಿದ್ದಾನೆ. ಅತ್ಯಾಚಾರ ನಡೆಸಿದ್ದ ಆರೋಪಿಗಳು ಯುವತಿಯ ಮೃತದೇಹವನ್ನು ಕಾಲುವೆಗೆ ಎಸೆದಿದ್ದರು. ಹಥ್ರಾಸ್ ದಲಿತ ಯುವತಿಯ ಭೀಕರ ಅತ್ಯಾಚಾರ, ಕೊಲೆ ಪ್ರಕರಣದ ಬಳಿಕ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಡಳಿತದ ಮೇಲೆ ಭಾರೀ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮತ್ತೆ ಹಲವು ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿವೆ.

Join Whatsapp