ಎನ್.ಐ.ಎ ದಾಳಿ ರಾಜಕೀಯ ಪ್ರೇರಿತ – ಎಸ್ ಡಿ.ಪಿ.ಐ

Prasthutha: November 19, 2020

ಬೆಂಗಳೂರಿನ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಎಸ್.ಡಿ.ಪಿ.ಐ ಕಚೇರಿಯ ಮೇಲೆ ನಡೆದಿರುವ ಎನ್.ಐ.ಎ ದಾಳಿ ರಾಜಕೀಯ ಪ್ರೇರಿತವಾಗಿದೆ ಎಂದು ಎಸ್.ಡಿ.ಪಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಆರೋಪಿಸಿದ್ದಾರೆ.

ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಹಿಂಸಾಚಾರದ ಹಿಂದೆ ರಾಜಕೀಯ ಷಡ್ಯಂತ್ರ ಇದೆ ಎಂಬುವುದಕ್ಕೆ ಸಂಪತ್ ರಾಜ್ ಬಂಧನವೇ ಪ್ರಮುಖ ಸಾಕ್ಷಿಯಾಗಿದೆ. ಸಂಪತ್ ರಾಜ್ ಬಂಧನದ ನಂತರ ಆತನನ್ನು ಮತ್ತೊಮ್ಮೆ ಕಸ್ಟಡಿಗೆ ಪಡೆದಿರುವ ತನಿಖಾ ಸಂಸ್ಥೆ, ಘಟನೆಗೆ ಕಾರಣಕಾರ್ತರಾದ ನೈಜ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಅವರನ್ನು ಬಂಧಿಸಬೇಕಾಗಿತ್ತು. ಸಂಪತ್ ರಾಜ್ ನ ರಾಜಕೀಯ ವೈಷಮ್ಯಕ್ಕೆ ಈಗಾಗಲೇ ಬಲಿಪಶುಗಳಾಗಿ ಅನೇಕ ಅಮಾಯಕರು ಜೈಲಿನಲ್ಲಿದ್ದಾರೆ. ಈ ಎಲ್ಲಾ ವಾಸ್ತವಂಶ ತಿಳಿದಿರುವ ತನಿಖಾ ಸಂಸ್ಥೆ, ಸರ್ಕಾರದ ಒತ್ತಡಕ್ಕೆ ಮಣಿದು ಬಿಜೆಪಿಯ ಸೈದ್ಧಾಂತಿಕ ವಿರೋಧಿಯಾದ ಎಸ್.ಡಿ.ಪಿ.ಐ ಪಕ್ಷವನ್ನು ಹಾಗೂ ಒಂದು ನಿರ್ದಿಷ್ಟ ಸಮುದಾಯದ ಮಂದಿಯನ್ನು ಗುರಿಪಡಿಸುತ್ತಿದೆ. ಅದೇ ರೀತಿ ತನಿಖೆಯ ನೆಪವೊಡ್ಡಿ ನಮ್ಮ ಪಕ್ಷದ ವಾರ್ಡ್ ಕಛೇರಿ ಮೇಲೆ ದಾಳಿ ಮಾಡಿದಲ್ಲದೇ, ಮಾರಕಾಸ್ತ್ರಗಳು ಸಿಕ್ಕಿವೆ ಎಂದು ಮಾಧ್ಯಮಕ್ಕೆ ಸುಳ್ಳು ಮಾಹಿತಿ ನೀಡಿ ನಮ್ಮ ಪಕ್ಷದ ಬೆಳವಣಿಗೆಗೆ ತಡೆಯೊಡ್ಡುವ ಹೇಯ ಕೃತ್ಯಕ್ಕೆ ತನಿಖಾ ಸಂಸ್ಥೆ ಕೈಹಾಕಿದೆ ಎಂದು ಅಫ್ಸರ್ ಕೊಡ್ಲಿಪೇಟೆ ತಿಳಿಸಿದ್ದಾರೆ.

ತನಿಖಾ ಸಂಸ್ಥೆ ನೈಜತೆಯನ್ನು ಮರೆಮಾಚಿ ಬೇಜವಾಬ್ದಾರಿತನದಿಂದ ವರ್ತಿಸುತ್ತಿದೆ. ಅಲ್ಲದೇ ಪಕ್ಷದ ಕುರಿತು ಸಮಾಜಕ್ಕೆ ತಪ್ಪು ಸಂದೇಶ ನೀಡುವ ತನ್ನ ಪ್ರಯತ್ನಕ್ಕೆ ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿದೆ. ತನಿಖಾ ಸಂಸ್ಥೆಯ ಈ ಕಾರ್ಯ ವೈಖರಿಯನ್ನು ನಾವು ನ್ಯಾಯಾಲಯದಲ್ಲಿ ಪ್ರಶ್ನಿಸಲಿದ್ದೇವೆ ಎಂದು ಅಫ್ಸರ್ ಕೊಡ್ಲಿಪೇಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!