ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

Prasthutha|

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಬಳಿ ಇಂದು ಒಂದೇ ಕುಟುಂಬದ ಭೀಕರವಾಗಿ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಪತಿ ಶಂಭು ಭಟ್(65), ಪತ್ನಿ ಮಾದೇವಿ ಭಟ್(40), ಮಗ ರಾಜೀವ್ ಭಟ್(34), ಸೊಸೆ ಕುಸುಮಾ ಭಟ್ (30) ಎಂಬವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಸಾಮೂಹಿಕ ಹತ್ಯೆಗೆ ಕಾರಣ ನಿಗೂಢವಾಗಿದೆ.

- Advertisement -


ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಗ್ರಾಮದ ಸಮೀಪ ಒಂದೇ ಕುಟುಂಬದ ನಾಲ್ವರನ್ನು ಕತ್ತಿಯಲ್ಲಿ ಕಡಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಆಸ್ತಿ ವಿಚಾರಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಕೊಲೆ ಮಾಡಿದವರು ಯಾರು? ಹತ್ಯೆಗೆ ನಿಖಕ ಕಾರಣ ಏನು? ಎನ್ನುವುದು ಇನ್ನೂ ತಿಳಿದುಬಂದಿಲ್ಲ. ಆದರೂ ಶ್ರೀಧರ್ ಭಟ್ ಎಂಬಾತನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


ಇದೀಗ ವಿಷಯ ತಿಳಿದು ಸ್ಥಳಕ್ಕೆ ಭಟ್ಕಳ ಗ್ರಾಮೀಣ ಠಾಣಾ ಪೊಲೀಸರು ದೌಡಾಯಿಸಿದ್ದು ತನಿಖೆ ನಡೆಸಿದ್ದಾರೆ.

- Advertisement -

Join Whatsapp