ಕನ್ಹಯ್ಯಾ ಲಾಲ್ ಕುಟುಂಬಕ್ಕೆ 1.70 ಕೋಟಿ ದೇಣಿಗೆ ಸಂಗ್ರಹಿಸಿದ ಕಪಿಲ್ ಮಿಶ್ರಾ

Prasthutha: July 2, 2022

ಜೈಪುರ್ : ರಾಜಸ್ತಾನದ ಉದಯಪುರದಲ್ಲಿ ಹತ್ಯೆಗೀಡಾದ ಟೈಲರ್ ಕನ್ಹಯ್ಯಾ ಲಾಲ್ ಕುಟುಂಬಕ್ಕೆ ಬಿಜೆಪಿ ನಾಯಕ ಕಪಿಲ್ ಮಿಶ್ರಾ, ಸುಮಾರು 1.70 ಕೋಟಿ ರೂ. ದೇಣಿಗೆ ಸಂಗ್ರಹಿಸಿದ್ದಾರೆ.

1.70 ಕೋಟಿಯಲ್ಲಿ, 1 ಕೋಟಿಯಷ್ಟು ಹಣವನ್ನು ಕನ್ಹಯ್ಯಾ ಲಾಲ್ ಅವರ ಮಕ್ಕಳ ವಿದ್ಯಾಭ್ಯಾಸ ಮತ್ತು ಮನೆಯ ಸಾಲ ತೀರಿಸಲು ನೀಡಲಾಗುವುದು. ಉಳಿದ ಹಣಗಳನ್ನು ಹಲ್ಲೆಗೊಳಗಾದ, ಕೊಲೆಗೀಡಾದವರನ್ನು ನಾವು ಗುರುತಿಸಿದ್ದು ನೆರವಿನ ರೂಪದಲ್ಲಿ ಅವರ ಕುಟುಂಬಕ್ಕೆ ನೀಡಲಾಗುವುದು ಎಂದು ಕಪಿಲ್ ಮಿಶ್ರಾ ಹೇಳಿದ್ದಾರೆ.

ಒಂದು ಕೋಟಿಯ ಗುರಿಯನ್ನು ಹೊಂದಿದ್ದೆವು. ಆದರೆ 70 ಲಕ್ಷ ಹೆಚ್ಚಿನ ದುಡ್ಡು ನಮಗೆ ಸಂಗ್ರಹವಾಗಿದೆ. ಇದು ನಮಗೆ ಸಂತಸ ತಂದಿದೆ ಎಂದಿದ್ದಾರೆ. ಕನ್ಹಯ್ಯಾ ಕುಟುಂಬವನ್ನು ಭೇಟಿ ಮಾಡಿ, ಅವರನ್ನು ಸಂತೈಸಿ ಈ ದೇಣಿಗೆಯನ್ನು ನೀಡಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ