ಕರ್ನಾಟಕಕ್ಕೆ 1200 ಮೆಟ್ರಿಕ್ ಟನ್ ಆಕ್ಸಿಜನ್ ಸರಬರಾಜು ಸಾಧ್ಯವಿಲ್ಲ ಎಂದ ಕೇಂದ್ರ!

Prasthutha|

►ಹೈಕೋರ್ಟ್ ಆದೇಶಕ್ಕೂ ಒಪ್ಪದ ಸರ್ಕಾರ

- Advertisement -

ಹೊಸದಿಲ್ಲಿ : ರಾಜ್ಯಕ್ಕೆ ಆಕ್ಸಿಜನ್ ಮಿತಿ ಹೆಚ್ಚಳ ಮಾಡಬೇಕು ಎಂಬ ಕರ್ನಾಟಕ ಹೈಕೋರ್ಟ್ ಆದೇಶವನ್ನು ಕೇಂದ್ರ ಸರ್ಕಾರ ನಿರಾಕರಿಸಿದ್ದು, 1200 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಸಾಧ್ಯವಿಲ್ಲ ಎಂದು ತಿಳಿಸಿದೆ.

ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳು ಮಿತಿ ಮೀರಿ ಆಕ್ಸಿಜನ್ ಕೊರತೆಯಿಂದ ರೋಗಿಗಳು ಸಾವನ್ನಪ್ಪುತ್ತಿದ್ದು, ಪ್ರತಿದಿನ 1200 ಮೆಟ್ರಿಕ್ ಟನ್ ಆಕ್ಸಿಜನ್ ಒದಗಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಕೇಂದ್ರ ಸರಕಾರಕ್ಕೆ ಆದೇಶ ನೀಡಿತ್ತು. ಇದನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿರುವ ಕೇಂದ್ರ ಸರ್ಕಾರ ಈಗಿನ ಪರಿಸ್ಥಿತಿಯಲ್ಲಿ 965 ಮೆಟ್ರಿಕ್ ಟನ್ ಗಿಂತ ಹೆಚ್ಚಿನ ಆಕ್ಸಿಜನ್ ಸರಬರಾಜು ಸಾಧ್ಯವಿಲ್ಲ ಎಂದು ತಿಳಿಸಿದೆ.

- Advertisement -

ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಒಂದು ದಿನಕ್ಕೆ 1700 ಮೆಟ್ರಿಕ್ ಟನ್ ಆಕ್ಸಿಜನ್ ನೀಡುವಂತೆ ಬೇಡಿಕೆ ಇಟ್ಟಿತ್ತು. ಆದರೆ ಕೇಂದ್ರ ಸರ್ಕಾರ ಕೇವಲ 862 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡಿತ್ತು ಎಂದು ತಿಳಿದು ಬಂದಿದೆ.

Join Whatsapp