ಕರ್ನಾಟಕದಲ್ಲಿ ಬಿಜೆಪಿಗೆ ಲೈಫ್ ಕೊಟ್ಟಿದ್ದೇ ನಾನು : ಹೆಚ್ .ಡಿ ಕುಮಾರಸ್ವಾಮಿ

Prasthutha: February 26, 2021

ಚನ್ನಪಟ್ಟಣ : ‘ನಾನು ಕಾಣದಿರೋ ಬಿಜೆಪಿ ಪಕ್ಷನಾ ಕರ್ನಾಟಕದಲ್ಲಿ? ಬಿಜೆಪಿಗೆ ಲೈಫ್ ಕೊಟ್ಟಿದ್ದೇ ನಾನು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

“ನನ್ನ ಮುಂದೆ ಇನ್ನು ಬಚ್ಚಾ ಇದೀಯಾ ನೀನು, ನನ್ನ ಬಗ್ಗೆ ಏಕವಚನದಲ್ಲಿ ಮಾತನಾಡುವ ಮುಂಚೆ ಯೋಚಿಸು, ನಿನಗಿಂತಲೂ ಚೆನ್ನಾಗಿ ಮಾತನಾಡಲು ನನಗೂ ಬರುತ್ತದೆ” ಎಂದು ಸಚಿವ ಸಿ.ಪಿ. ಯೋಗೇಶ್ವರ್​ ವಿರುದ್ಧ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಯೋಗೇಶ್ವರ್ ನೀನು ಸಚಿವ ಆಗಿದ್ದೀಯಾ. ನಿನ್ನ ಕೆಲಸ ಮಾಡಿಕೊಂಡು ಹೋಗು, ನನ್ನ ವಿರುದ್ಧ ಮಾತನಾಡಿ ಲೀಡರ್ ಆಗುವ ಪ್ರಯತ್ನ ಬೇಡ. ಯಾರೋ ಅಡವಿಟ್ಟ ಇಸ್ಪೀಟು ದುಡ್ಡಲ್ಲಿ ನೀನು ಮಂತ್ರಿಯಾಗಿದ್ದೀಯ. ನಿನ್ನಂತವನು ನನ್ನ ಬಗ್ಗೆ ಏನು ಮಾತನಾಡಲು ಸಾಧ್ಯ?’ ಎಂದು ಮಾಜಿ ಸಿಎಂ ಕಿಡಿಕಾರಿದ್ದಾರೆ. ‘ನಾನು ಕಾಣದಿರೋ ಬಿಜೆಪಿ ಪಕ್ಷನಾ ಕರ್ನಾಟಕದಲ್ಲಿ? ಬಿಜೆಪಿಗೆ ಲೈಫ್ ಕೊಟ್ಟಿದ್ದೇ ನಾನು. 2006 ರಲ್ಲಿ ಎಲ್ಲಾ ಮಂಗನ ತರಹ ಹಾರಲು ರೆಡಿಯಾಗಿದ್ದರು. ಅವತ್ತು ಬಿಜೆಪಿಯನ್ನ ಉಳಿಸಿದ್ದು ನಾನು ಎಂದು ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!