ಕರ್ನಾಟಕದ ಇಬ್ಬರಿಗೆ ರೂಪಾಂತರಿ ಓಮಿಕ್ರಾನ್: ಆತಂಕ ಬೇಡವೆಂದ ಕೇಂದ್ರ ಆರೋಗ್ಯ ಇಲಾಖೆ

Prasthutha: December 2, 2021

ಬೆಂಗಳೂರು/ನವದೆಹಲಿ: ದಕ್ಷಿಣ ಆಫ್ರಿಕಾ ಸೇರಿದಂತೆ ವಿವಿಧ ದೇಶಗಳಲ್ಲಿ ಆತಂಕ ಮೂಡಿಸಿರುವ ಹೊಸ ಮಾದರಿಯ ಕೋವಿಡ್ 19 ನ ರೂಪಾಂತರಿ ಓಮಿಕ್ರಾನ್ ಸೋಂಕು ರಾಜ್ಯಕ್ಕೆ ಕಾಲಿಟ್ಟಿದೆ. ರಾಜ್ಯದಲ್ಲಿ ಇಬ್ಬರಿಗೆ ಸೋಂಕು ದೃಢಪಟ್ಟಿದ್ದು, ಇನ್ನೂ ಮೂವರಿಗೆ ಸೋಂಕು ವ್ಯಾಪಿಸಿರುವ ಸಾಧ್ಯತೆಯಿದೆ. ಓಮಿಕ್ರಾನ್ ಸೋಂಕಿಗೆ ಕರ್ನಾಟಕ ಹೆಬ್ಬಾಗಿಲಾಗಿದ್ದು, ಇಡೀ ದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.


ರಾಜ್ಯದ 66 ವರ್ಷದ ವೃದ್ದ ಮತ್ತು 46 ವರ್ಷದ ವ್ಯಕ್ತಿಯಲ್ಲಿ ಒಮಿಕ್ರೋನ್ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಈ ವಿಷಯವನ್ನು ಖಚಿತಪಡಿಸಿದೆ. ಕೋವಿಡ್ ಸೋಂಕಿಗೆ ಇಡೀ ದೇಶದಲ್ಲಿ ಕಲಬುರಗಿಯ ವ್ಯಕ್ತಿಯೊಬ್ಬರು ಮೊದಲ ಬಾರಿಗೆ ಬಲಿಯಾಗಿದ್ದರು. ಇದೀಗ ಇಡೀ ದೇಶದಲ್ಲಿ ಓಮಿಕ್ರಾನ್ ಸೋಂಕು ಕರ್ನಾಟಕದಲ್ಲೇ ಪತ್ತೆಯಾಗಿರುವುದು ತೀವ್ರ ಕಳವಳಕ್ಕೆ ಕಾರಣವಾಗಿದೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ ವಾಲ್, ಕರ್ನಾಟಕದ ಇಬ್ಬರಿಗೆ ರೂಪಾಂತರಿ ಓಮಿಕ್ರಾನ್ ಸೋಂಕು ಖಚಿತಪಟ್ಟಿದೆ. ಈ ಬಗ್ಗೆ ಸೂಕ್ತ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದ್ದಾರೆ.


ಕರ್ನಾಟಕದಲ್ಲಿ 2 ಮಾದರಿಯ ಆಡಳಿತ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಅದೇ ರೀತಿ ವಿವಿಧ ರಾಜ್ಯಗಳಿಗೆ ಕಟ್ಟೆಚ್ಚರ ವಹಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಅವರು ಹೇಳಿದರು.
ದಕ್ಷಿಣ ಆಫ್ರಿಕಾ ಸೇರಿದಂತೆ ಓಮಿಕ್ರಾನ್ ಸೋಂಕು ಪತ್ತೆಯಾಗಿರುವ ದೇಶಗಳಿಂದ ಬರುವ ಎಲ್ಲ ಪ್ರಯಾಣಿಕರನ್ನು ವಿಮಾನನಿಲ್ದಾಣಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸುವ ಜೊತೆಗೆ ಆರ್ ಟಿಪಿಸಿಆರ್ ಪರೀಕ್ಷೆ ನಡೆಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನೆಗೆಟಿವ್ ವರದಿ ಬಂದವರು ಮನೆಯಲ್ಲಿ ಕಡ್ಡಾಯವಾಗಿ 7 ದಿನಗಳ ಕಾಲ ಕ್ವಾಂರಟೈನಲ್ಲಿ ಇರುವುದು ಸೇರಿದಂತೆ ಅಗತ್ಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದ್ದಾರೆ.


ಈವರೆಗೆ 373 ಮಂದಿಯಲ್ಲಿ ಸೋಂಕು:
ಜಗತ್ತಿನಲ್ಲಿ ಇರುವರೆಗೂ 29 ರಾಷ್ಟ್ರಗಳಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದ್ದು 373 ಎಂಟು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಜಗತ್ತಿನ ಉಳಿದ ಭಾಗಗಳಲ್ಲಿ ಓಮಿಕ್ರಾನ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಕಟ್ಟೆಚ್ಚರವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಹೊಸ ರೂಪಾಂತರಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳುವುದು ಎಲ್ಲ ರಾಜ್ಯ ಸರ್ಕಾರಗಳು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು


ಪರೀಕ್ಷೆ ಪ್ರಮಾಣ ಹೆಚ್ಚಳ
ಭಾರತೀಯ ವೈದ್ಯಕೀಯ ಶಿಕ್ಷಣ ಮಂಡಳಿಯ ಮುಖ್ಯಸ್ಥ ಬಲರಾಮ್ ಭಾರ್ಗವ ಮಾತನಾಡಿ,ಕರ್ನಾಟಕದಲ್ಲಿ ಪತ್ತೆಯಾದ ಓಮಿಕ್ರಾನ್ ಸೋಂಕು ಹಿನ್ನೆಲೆಯಲ್ಲಿ ದೇಶದ 37 ಪ್ರಯೋಗಾಲಯಗಳಲ್ಲಿ ಜಿನೋಮ್ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಈಗಾಗಲೇ ಕೇಂದ್ರ ಆರೋಗ್ಯ ಸಚಿವಾಲಯ ದೇಶದ ವಿವಿಧ ಪ್ರಯೋಗಾಲಯಗಳಲ್ಲಿ ಪರೀಕ್ಷೆ ಪ್ರಮಾಣ ಹೆಚ್ಚು ಮಾಡಲು ಆದ್ಯತೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು


ಪ್ರಸರಣ ವೇಗ ಹೆಚ್ಚಳ
ಕೊರೋನೋ ಸೋಂಕಿನ ವಿವಿಧ ರೂಪಾಂತರಗಳ ಗಿಂತ ಒಮಿಕ್ರಾನ್ ಸೋಂಕು ಅತಿವೇಗವಾಗಿ ಪ್ರಸರಣ ಹೊಂದುವ ಸಾಧ್ಯತೆ ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಒಮಿಕ್ರಾಮ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ದೇಶದ ಎಲ್ಲ ಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಜೊತೆಗೆ ವಿಮಾನ ನಿಲ್ದಾಣದಲ್ಲಿ ಎಚ್ಚರಿಕೆ ವಹಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ ವಾಲ್ ತಿಳಿಸಿದ್ದಾರೆ

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!