ಕರ್ನಾಟಕ ಉಪಚುನಾವಣೆ | ಜೆಡಿಎಸ್ ಗೆ ಸಮಾಜವಾದಿ ಪಕ್ಷದ ಬೆಂಬಲ

Prasthutha|

ಬೆಂಗಳೂರು : ನ.3ರಂದು ನಡೆಯಲಿರುವ ಶಿರಾ, ಆರ್. ಆರ್. ನಗರ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ಸಮಾಜವಾದಿ ಪಕ್ಷದ ರಾಜ್ಯ ಘಟಕ ಘೋಷಿಸಿದೆ.

- Advertisement -

“ನ.3ರಂದು ನಡೆಯಲಿರುವ ಕರ್ನಾಟಕ ಉಪ ಚುನಾವಣೆಯಲ್ಲಿ ಶಿರಾ ಮತ್ತು ಆರ್.ಆರ್. ನಗರ ಕ್ಷೇತ್ರದಲ್ಲಿ ನಾವು ಜೆಡಿಎಸ್ ಅನ್ನು ಷರತ್ತು ರಹಿತವಾಗಿ ಬೆಂಬಿಸುತ್ತಿದ್ದೇವೆ. ಜೆಡಿಎಸ್ ಅಭ್ಯರ್ಥಿ ಗೆಲ್ಲಲು ಬೇಕಾದ ಎಲ್ಲ ಪ್ರಯತ್ನಗಳನ್ನು ನಾವು ಮಾಡುತ್ತೇವೆ’’ ಎಂದು ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ರಾಬಿನ್ ಮ್ಯಾಥ್ಯೂ ಹೇಳಿದ್ದಾರೆ. ಅವರು ಈ ಸಂಬಂಧ ಜೆಡಿಎಸ್ ಅಧ್ಯಕ್ಷ ಕುಮಾರಸ್ವಾಮಿ ಅವರಿಗೆ ಪತ್ರ ಬರೆದು ಈ ವಿಷಯ ತಿಳಿಸಿದ್ದಾರೆ.

“ಅಖಿಲೇಶ್ ಜೀ ಅವರ ಶುಭ ಹಾರೈಕೆಯ ಸಂದೇಶವನ್ನೂ ನಿಮಗೆ ನಾವು ತಲುಪಿಸುತ್ತಿದ್ದೇವೆ. ಕರ್ನಾಟಕದಲ್ಲಿ ಬದಲಾವಣೆಯ ಹೊಸ ಅಧ್ಯಾಯ ಈ ಮೂಲಕ ಆರಂಭವಾಗಲಿದೆ ಎಂಬ ಭರವಸೆ ನಮಗಿದೆ’’ ಎಂದು ರಾಬಿನ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

- Advertisement -

ನ.17ರಿಂದ ಕಾಲೇಜು ಆರಂಭಿಸುವುದಾಗಿ ಸರಕಾರ ಘೋಷಿಸಿದೆ. ಈ ಬಗ್ಗೆ ಪರ-ವಿರೋಧ ಹೇಳಿಕೆಗಳು ವ್ಯಕ್ತವಾಗುತ್ತಿವೆ. ಕೋವಿಡ್ – 19 ಪ್ರಕರಣಗಳು ಇನ್ನೂ ಸಾಕಷ್ಟು ದೊಡ್ಡ ಪ್ರಮಾಣದಲ್ಲಿರುವಾಗ ಕಾಲೇಜು ಆರಂಭಿಸಲು ಸರಕಾರ ನಿರ್ಧಾರ ಕೈಗೊಂಡಿರುವುದು ಸರಿಯೇ? ತಪ್ಪೇ? ಎಂಬ ಬಗ್ಗೆ ‘ಪ್ರಸ್ತುತ’ ಜನಾಭಿಮತ ಸಂಗ್ರಹಿಸುತ್ತಿದೆ. ಈ ಬಗ್ಗೆ ನಿಮ್ಮ ನಿಲುವನ್ನು ‘ಪ್ರಸ್ತುತ’ ಫೇಸ್ ಬುಕ್ ಪೇಜ್ ನಲ್ಲಿ ವ್ಯಕ್ತಪಡಿಸಿ.

https://www.facebook.com/2171161852895947/posts/3694124020599715/

Join Whatsapp