ಕೆಎಸ್ ಆರ್ ಟಿಸಿ ಬಸ್ ಪಲ್ಟಿಪ್ರಯಾಣಿಕರು ಪಾರು

Prasthutha|

ಬೆಳಗಾವಿ,ಆ.7-ಚಾಲಕನ ನಿಯಂತ್ರಣ ತಪ್ಪಿದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ ಆರ್ ಟಿಸಿ)ಬಸ್ ಡಿವೈಡರ್​ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ತಾಲೂಕಿನ ಬಡೇಕೊಳ್ಳಿಮಠ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ.
ಅದೃಷ್ಟವಶಾತ್ ಬಸ್​​ನಲ್ಲಿದ್ದ ಎಲ್ಲಾ ಪ್ರಯಾಣಿಕರು ಅಪಾಯದಿಂದ‌ ಪಾರಾಗಿದ್ದಾರೆ.
ಕಳೆದ ಮೂರು ದಿನಗಳಿಂದ ಜಿಲ್ಲೆಯಾದ್ಯಂತ ಮಳೆ ಆರ್ಭಟ ಜೋರಾಗಿದೆ. ಮಳೆಯಿಂದ ಚಾಲಕನಿಗೆ ರಸ್ತೆ ಸರಿಯಾಗಿ ಕಾಣದೇ ಅವಘಡ ಸಂಭವಿಸಿರುವ ಸಾಧ್ಯತೆ ಇದೆ. ಬೆಳಗಾವಿಯಿಂದ ಹಾವೇರಿ ಜಿಲ್ಲೆಯ ಹಿರೇಕೆರೂರಿಗೆ ಹೋಗುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ಇದಾಗಿದೆ.
ಬಸ್​ನಲ್ಲಿ 35 ಜನ ಪ್ರಯಾಣಿಕರಿದ್ದರು. ಇದರಲ್ಲಿ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.ಸ್ಥಳಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ

Join Whatsapp