ಕೊರೊನಾ ಸಂಕಷ್ಟ | ಮಂಗಳೂರಿನಲ್ಲಿ ಮೀನುಗಾರಿಕೆ ಸೆ.1ಕ್ಕೆ ಮುಂದೂಡಿಕೆ

Prasthutha: August 3, 2020

ಮಂಗಳೂರು : ಜಗತ್ತಿನಾದ್ಯಂತ ಹರಡಿರುವ ಕೊರೊನಾ ಸೋಂಕಿನ ಸಂಕಷ್ಟದ ಪರಿಣಾಮ ಕರಾವಳಿ ಮೀನುಗಾರರ ಮೇಲೂ ದೊಡ್ಡ ಪ್ರಮಾಣದಲ್ಲಿ ತಟ್ಟಿದೆ. ಆ.1ರಿಂದ ಆರಂಭಗೊಳ್ಳ ಬೇಕಿದ್ದ ಮೀನುಗಾರಿಕೆ ಚಟುವಟಿಕೆ ಕೊರೊನಾ ಸಂಕಷ್ಟದ ಕಾರಣ, ಇನ್ನೂ ಒಂದು ತಿಂಗಳು ಮುಂದೂಡಲ್ಪಟ್ಟಿದೆ. ಕರಾವಳಿಯಲ್ಲಿ ಸೆ.1ರಿಂದ ಮೀನುಗಾರಿಕೆ ಆರಂಭಿಸಲು ಮೀನುಗಾರರ ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ನಿರ್ಧರಿಸಲಾಗಿದೆ.

ಮೀನುಗಾರಿಕೆ ಆರಂಭವಾದ ಬಳಿಕ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಮೀನುಗಾರಿಕೆ ಒಂದು ತಿಂಗಳು ಮುಂದೂಡುವ ಬಗ್ಗೆ ಎಲ್ಲ ಸಂಘಟನೆಗಳ ಪ್ರಮುಖರು ಒಮ್ಮತದ ಒಪ್ಪಿಗೆ ಸೂಚಿಸಿದ್ದಾರೆ.

ಜಿಲ್ಲೆಯ ಬಂದರಿನಲ್ಲಿ ಸುಮಾರು 1,200 ಬೋಟುಗಳು ಮೀನುಗಾರಿಕೆಯಲ್ಲಿ ತೊಡಗುತ್ತವೆ. ಈ ವೇಳೆ ವಿವಿಧ ರಾಜ್ಯಗಳ ಕಾರ್ಮಿಕರು ಇಲ್ಲಿಗೆ ಆಗಮಿಸುತ್ತಾರೆ. ಹೀಗಾಗಿ ಸುರಕ್ಷಿತ ಮೀನುಗಾರಿಕೆಗೆ ಮಾರ್ಗಸೂಚಿ ರಚಿಸಬೇಕಾಗಿದೆ. ಈ ಕುರಿತು ಜಿಲ್ಲಾಡಳಿತದೊಂದಿಗೆ ಚರ್ಚಿಸಲಾಗುವುದು ಎಂದು ಮಂಗಳೂರು ಟ್ರಾಲ್ ಬೋಟ್ ಮೀನುಗಾರರ ಸಂಘದ ಅಧ್ಯಕ್ಷ ನಿತಿನ್ ಕುಮಾರ್ ಹೇಳಿದ್ದಾರೆ. ಸಭೆಯಲ್ಲಿ ಟ್ರಾಲ್ ಬೋಟ್, ಪರ್ಸಿನ್ ಬೋಟ್, ಮೀನು ಮಾರಾಟಗಾರರು, ಮೀನು ರಫ್ತು ಕಂಪೆನಿಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ