ಕೋಮು ಪ್ರಚೋದನಕಾರಿ ಪೋಸ್ಟ್ | ಆರೋಪಿ ರಘುರಾಮ್ ಶೆಟ್ಟಿ ಬಂಧನ

Prasthutha|

ಬೆಳ್ತಂಗಡಿ : ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಉದ್ವಿಗ್ನತೆಗೆ ಸಂಬಂಧಿಸಿದ ಪೋಸ್ಟ್ ಹಾಕಿ, ತಲೆ ಮರೆಸಿಕೊಂಡಿದ್ದ ಬಾರ್ಯ ಪುತ್ತಿಲ ನಿವಾಸಿ ರಘುರಾಮ ಶೆಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತಿಲದ ಸಂಬಂಧಿಕರ ಮನೆಯಲ್ಲಿ ಆರೋಪಿ ರಘುರಾಮ ಶೆಟ್ಟಿ ತಲೆ ಮರೆಸಿಕೊಂಡಿದ್ದ ಖಚಿತ ಮಾಹಿತಿಯ ಆಧಾರದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದೆ.

ಅಯೋಧ್ಯೆ ರಾಮ ಮಂದಿರ ಭೂಮಿಪೂಜೆಯ ದಿನದಂದು ರಘುರಾಮ ಶೆಟ್ಟಿ ನೀತಿ ಸಂಹಿತೆ ಉಲ್ಲಂಘಿಸಿ ಪಟಾಕಿ ಸಿಡಿಸಿದ ವಿಚಾರಕ್ಕೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ರಘುರಾಮ್ ವಿರುದ್ಧ ಕರ್ಪಾಡಿ ನಿವಾಸಿ ಜಲೀಲ್ ಎಂಬವರು ದೂರು ದಾಖಲಿಸಿದ್ದರು.

- Advertisement -