ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೆ ಐವರು ಸಾವು!

Prasthutha|

ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೆ ಐವರು ಸಾವು! ಆಮ್ಲಜನಕ ಪೂರೈಕೆಯ ಕೊರತೆಯಿಂದಾಗಿ ಐವರು ಕೋವಿಡ್‌ ರೋಗಿಗಳು ಮೃತಪಟ್ಟ ಕರುಣಾಜನಕ ಘಟನೆ ಕೋಲಾರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಇಲ್ಲಿನ ಅವ್ಯವಸ್ಥೆ ಬಗ್ಗೆ ಜನ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ಇದ್ದಕ್ಕಿದಂತೆ ಆಕ್ಸಿಜನ್‌ ಸರಬರಾಜು ಸ್ಥಗಿತಗೊಂಡಿದ್ದು, ಐಸಿಯು ವಾರ್ಡ್‌ನಲ್ಲಿದ್ದ ಐದು ಜನರು ಉಸಿರಾಟವಿಲ್ಲದೆ ಒದ್ದಾಡಿದ್ದಾರೆ ಎನ್ನಲಾಗಿದೆ.  ಈ ವೇಳೆ ರೋಗಿಗಳ ಕುಟುಂಬಸ್ಥರು ಸಂಬಂಧಪಟ್ಟ ಅಧಿಕಾರಿಗಳಿಗೆ ಫೋನ್‌ ಮಾಡಿದಾಗ ಯಾರೂ ಕರೆ ಸ್ವೀಕರಿಸದೆ ನಿರ್ಲಕ್ಷ್ಯ ತೋರಿದ್ದಾರೆ. ಕೊನೆಗೆ ಆಮ್ಲಜನಕ ಪೂರೈಕೆ ಇಲ್ಲದೆ ಐಸಿಯುನಲ್ಲಿದ್ದ ಐವರೂ ಮೃತಪಟ್ಟಿದ್ದಾರೆ.

- Advertisement -