ಜಾತಿ ನಿಂದನೆಯ ಉದ್ದೇಶದಿಂದಲೇ ದೌರ್ಜನ್ಯ ಎಸಗಿದಾಗ ಮಾತ್ರ ಎಸ್ ಸಿ/ಎಸ್ ಟಿ ಕಾಯ್ದೆ ಅನ್ವಯ | ಸುಪ್ರೀಂ ಕೋರ್ಟ್

Prasthutha|

ಹೊಸದಿಲ್ಲಿ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿರುದ್ಧದ ಎಲ್ಲಾ ನಿಂದನೆಗಳನ್ನು ಎಸ್ ಸಿ/ ಎಸ್ ಟಿ ದೌರ್ಜನ್ಯ ತಡೆಗಟ್ಟುವ ಕಾಯ್ದೆಯ ವ್ಯಾಪ್ತಿಗೆ ಒಳಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟು ತೀರ್ಪು ನೀಡಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವನೆಂಬ ಕಾರಣದಿಂದ ನಿಂದನೆ ಅಥವಾ ಬೆದರಿಕೆಗೆ ಒಳಗಾದರೆ ಆ ಕಾನೂನಿನ ಪ್ರಕಾರ ಪ್ರಕರಣ ದಾಖಲಿಸಬಹುದು.

- Advertisement -

ದೌರ್ಜನ್ಯವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವ್ಯಕ್ತಿಯ ವಿರುದ್ಧವಾಗಿದೆ ಎಂಬ ಏಕೈಕ ಕಾರಣಕ್ಕಾಗಿ ಈ ಪ್ರಕರಣವು ಎಸ್ ಸಿ/ ಎಸ್ ಟಿ ದೌರ್ಜನ್ಯ ತಡೆ ಕಾಯ್ದೆಯ ವ್ಯಾಪ್ತಿಗೆ ಬರುವುದಿಲ್ಲ, ಜಾತಿ ನಿಂದನೆಯ ಉದ್ದೇಶದಿಂದಲೇ ದೌರ್ಜನ್ಯ ಎಸಗಿದರೆ ಎಸ್ ಸಿ / ಎಸ್ ಟಿ ದೌರ್ಜನ್ಯ ಕಾಯ್ದೆ ಅನ್ವಯವಾಗುತ್ತದೆ ಎಂದು ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್, ಹೇಮಂತ್ ಗುಪ್ತಾ ಮತ್ತು ಅಜಯ್ ರಾಸ್ತೋಗಿ ಅವರನ್ನೊಳಗೊಂಡ ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ.

- Advertisement -