ಜಾರಕಿಹೊಳಿ ಸೆಕ್ಸ್ CD ಹಗರಣ | 5 ಕೋಟಿ ಡೀಲ್: ಕುಮಾರ ಸ್ವಾಮಿ ಆರೋಪ

Prasthutha|

ಮೈಸೂರು : ರಮೇಶ್ ಜಾರಕಿಹೊಳಿ ಸೆಕ್ಸ್ CD ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ವ್ಯವಹಾರ ನಡೆದಿದೆ. ಇದರ ಹಿಂದೆ ಪ್ರಭಾವಿಗಳ ಕೈವಾಡವಿದೆ. ಕಳೆದ ಮೂರು ತಿಂಗಳಿಂದ ಈ ಡೀಲ್ ನಡೆದಿದೆ. ಪ್ರಕರಣದ ತನಿಖೆ ನಡೆಸುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದ್ದಾರೆ.

- Advertisement -

ರಮೇಶ್ ಜಾರಕಿಹೊಳಿ ಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಉದ್ದೇಶದಿಂದ CD ಬ್ಲಾಕ್ ಮೇಲ್ ಮಾಡಲಾಗಿದೆ. ಇದೀಗ ರಮೇಶ್ ಜಾರಕಿಹೊಳಿ ಅವರನ್ನು ಮಂತ್ರಿ ಸ್ಥಾನದಿಂದ ಕೆಳಗಿಳಿಸುವಲ್ಲಿ ಸಫಲರಾಗಿದ್ದಾರೆ.

ನಾನು ಈ ಪ್ರಕರಣವನ್ನು ನೋಡಿ ಖುಷಿ ಪಡುವವನಲ್ಲ. ನಾನು ಒಂದು ಕಲ್ಲು ಹೊಡೆಯಬೇಕು ಎಂದು ಹೊಡೆಯಲ್ಲ.ನನಗೆ ತಿಳಿದುಬಂದಿರುವ ಮಾಹಿತಿ ಪ್ರಕಾರ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

- Advertisement -