ಟೆರೇಸ್ ಮೇಲೆ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ : ವೃದ್ಧನ ಬಂಧನ

Prasthutha: November 5, 2020

ಹೊಸದಿಲ್ಲಿ : ಅಪ್ರಾಪ್ತ ಬಾಲಕಿ ಮನೆಯ ಟೆರೇಸ್ ಮೇಲೆ ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಯಾದ ನಂತರ ಮಗುವನ್ನು ಬಟ್ಟೆಯಿಂದ ಸುತ್ತಿ ಮನೆಯ ಸಮೀಪವಿರುವ ಅಂಗಡಿಯ ಬಳಿ ಬಿಡಲಾಗಿತ್ತು

ಉತ್ತರ ದೆಹಲಿಯ ಬೀದಿಯಲ್ಲಿರುವ ಅಂಗಡಿಯ ಮುಂದೆ ನವಜಾತ ಶಿಶುವನ್ನು ನೋಡಿರುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಪೊಲೀಸರಿಗೆ ಮಾಹಿತಿ ನೀಡಿದ್ದ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಸುತ್ತಮುತ್ತಲ ಪ್ರದೇಶದಲ್ಲಿ ಪ್ರಾಥಮಿಕ ತನಿಖೆ ನಡೆಸಲಾಗಿದ್ದರೂ ಯಾವುದೇ ಮಹತ್ವದ ಪುರಾವೆಗಳು ದೊರೆತಿರಲಿಲ್ಲ. ನಂತರ ಹತ್ತಿರದ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ 16 ವರ್ಷದ ಬಾಲಕಿಯೊಬ್ಬಳು ಮಗುವನ್ನು ಅಂಗಡಿಯ ಮುಂದೆ ಬಿಟ್ಟು ಹೋಗಿರುವುದು ಕಂಡು ಬಂದಿದೆ.

ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಪೋಕ್ಸೋ ಕಾಯ್ದೆಯಡಿ ಹತ್ತಿರದ ಅಂಗಡಿಯ 60 ವರ್ಷದ ವೃದ್ಧನನ್ನು ಬಂಧಿಸಲಾಗಿದೆ. ಪೊಲೀಸರು ಬಾಲಕಿಯನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಎಂಟು ತಿಂಗಳ ಹಿಂದೆ 60 ವರ್ಷದ ವ್ಯಕ್ತಿಯಿಂದ ಅತ್ಯಾಚಾರಕ್ಕೊಳಗಾಗಿ ಮನೆಯವರಿಗೆ ಹೆದರಿ ಈ ಘಟನೆಯನ್ನು ಯಾರಿಗೂ ತಿಳಿಸಲಿಲ್ಲ ಎಂದು ಬಾಲಕಿಯು ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾಳೆ. ಬಾಲಕಿ ಮತ್ತು ತಾಯಿ ಮನೆಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!