January 22, 2021

‘ಟ್ರಂಪ್ ಹೋಗಿ ಆಯ್ತು, ಇನ್ನು ಮೋದಿ’ ಹ್ಯಾಷ್ ಟ್ಯಾಗ್ ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್

ಜೋ ಬೈಡೆನ್ ಅಮೆರಿಕದ 46 ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಟ್ವಿಟರ್‌ನಲ್ಲಿ #TrumpGoneModiNext ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್ ಆಗುತ್ತಿದೆ. ಅಮೆರಿಕ ಭಾರತದ ಕಣ್ಣು ತೆರೆಸಿದೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಟ್ವೀಟ್ ಮಾಡಿದೆ. 2020 ರ ಅಮೇರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಸೋಲಿನ ನಂತರ 2019 ರಲ್ಲಿ ಹ್ಯೂಸ್ಟನ್‌ನಲ್ಲಿ ನಡೆದ ಹೌಡಿ ಮೋದಿ ರ್ಯಾಲಿಯಲ್ಲಿ ಭಾಗವಹಿಸಿ ಟ್ರಂಪ್‌ಗೆ ಬೆಂಬಲ ನೀಡಿದ್ದಕ್ಕಾಗಿ ಹಲವಾರು ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿಯವರನ್ನು ಅಪಹಾಸ್ಯ ಮಾಡಿದ್ದಾರೆ.

“ಬಿಜೆಪಿ ರಿವರ್ಸ್ ರಾಬಿನ್‌ಹುಡ್ ಸಿಂಡ್ರೋಮ್‌ನಿಂದ ಬಳಲುತ್ತಿದೆ. ಅದರ ಎಲ್ಲಾ ಲಕ್ಷಣಗಳು ಬಡವರ ವಿರುದ್ಧ ತೆಗೆದುಕೊಳ್ಳುತ್ತಿರುವ ಕ್ರಮಗಳು ಮತ್ತು ಅವರ ಕೋರ್ಪೊರೇಟ್ ಸ್ನೇಹಿತರ ಜೇಬನ್ನು ತುಂಬುವುದಾಗಿದೆ. ನಮ್ಮ ದೇಶವು ನಾಲ್ಕು ಅಥವಾ ಐದು ಬಂಡವಾಳಶಾಹಿಗಳ ಒಡೆತನದಲ್ಲಾಗುವ ಮೊದಲು ಎಲ್ಲಾ ದೇಶಭಕ್ತರು ಪ್ರಧಾನಿ ನರೇಂದ್ರ ಮೋದಿಯವರನ್ನು ತಮ್ಮ ಸ್ನೇಹಿತ ಡೊನಾಲ್ಡ್ ಟ್ರಂಪ್ ರಂತೆ ಅಧಿಕಾರದಿಂದ ಹೊರಬರಲು ಸಹಾಯ ಮಾಡಬೇಕು” ಎಂದು ಕಾಂಗ್ರೆಸ್ ಐಟಿ ಸೆಲ್ ನ ಗೌರವ್ ಪಾಂಡೆ ಟ್ವೀಟ್ ಮಾಡಿದ್ದಾರೆ.

ಶೋಷಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಸದಾ ಮಿಡಿಯುವ ಪ್ರಸ್ತುತ ಪಾಕ್ಷಿಕಕ್ಕೆ ಚಂದಾದಾರಾಗಿರಿ. ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ವಿಶೇಷ ವರದಿ