ಡಾ. ಕಫೀಲ್ ಖಾನ್ ತಕ್ಷಣ ಬಿಡುಗಡೆಗೆ ಅಲಹಾಬಾದ್ ಹೈಕೋರ್ಟ್ ಆದೇಶ | ಎನ್ ಎಸ್ ಎ ಆರೋಪ ವಜಾ
Prasthutha: September 1, 2020

ಲಖನೌ: ಖ್ಯಾತ ಸಾಮಾಜಿಕ ಹೋರಾಟಗಾರ ಡಾ. ಕಫೀಲ್ ಖಾನ್ ಅವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಮಾಡಿರುವ ದೋಷಾರೋಪಗಳನ್ನು ನಿರಾಕರಿಸಿರುವ ಅಲಹಾಬಾದ್ ಹೈಕೋರ್ಟ್, ಅವರನ್ನು ತಕ್ಷಣವೇ ಬಿಡುಗಡೆಗೊಳಿಸುವಂತೆ ಆದೇಶಿಸಿದೆ. ಖಾನ್ ಕಳೆದ ಜನವರಿ 29ರಿಂದ ಉತ್ತರ ಪ್ರದೇಶದ ಮಥುರಾ ಜೈಲಿನಲ್ಲಿ ಬಂಧಿತರಾಗಿದ್ದಾರೆ.
2019, ಡಿ.10ರಂದು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ, ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಖಾನ್ ಪ್ರಚೋದನಕಾರಿ ಭಾಷಣ ಮಾಡಿದ್ದರು ಎಂದು ಆಪಾದಿಸಲಾಗಿತ್ತು. ಆಗಸ್ಟ್ ಮಧ್ಯದಲ್ಲಿ, ಉತ್ತರ ಪ್ರದೇಶ ಸರಕಾರ ಖಾನ್ ರ ಬಂಧನ ಮೂರು ತಿಂಗಳು ವಿಸ್ತರಿಸಿತ್ತು.
ಖಾನ್ ರ ತಾಯಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈ ತೀರ್ಪು ನೀಡಿದೆ. ಖಾನ್ ಅವರನ್ನು ಅಕ್ರಮವಾಗಿ ವಶಕ್ಕೆ ಪಡೆಯಲಾಗಿದೆ ಎಂದು ಆಪಾದಿಸಿ ಅವರ ತಾಯಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು.
