ತಿರುವನಂತಪುರಂ ವಿಮಾನ ನಿಲ್ದಾಣವನ್ನು ಅದಾನಿ ಗ್ರೂಪ್‌ಗೆ ಗುತ್ತಿಗೆ ನೀಡುವುದರ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೊರೆ ಹೋದ ಕೇರಳ ಸರಕಾರ:

Prasthutha|

ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಎಂಟರ್ ‌ಪ್ರೈಸಸ್‌ ಗೆ ಗುತ್ತಿಗೆ ನೀಡುವ ಕೇಂದ್ರದ ನಿರ್ಧಾರವನ್ನು ತಡೆಹಿಡಿಯಬೇಕೆಂದು ಕೋರಿ ಕೇರಳ ಸರಕಾರ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ ಎಂದು ಎನ್‌.ಡಿ.ಟಿವಿ ವರದಿ ಮಾಡಿದೆ.

ಅದಾನಿ ಎಂಟರ್‌ಪ್ರೈಸಸ್ ಜೈಪುರ, ಗುವಾಹಟಿ ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಗಳನ್ನು ಈ ವರ್ಷದ ಆಗಸ್ಟ್‌ನಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯ ಮೂಲಕ ಗುತ್ತಿಗೆ ನೀಡುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿತ್ತು. ತಿರುವನಂತಪುರಂ ವಿಮಾನ ನಿಲ್ದಾಣವನ್ನು ಅದಾನಿ ಗ್ರೂಪ್ ಗೆ 50 ವರ್ಷಗಳ ಕಾಲ ಗುತ್ತಿಗೆ ನೀಡಲು ಕೇಂದ್ರ ಸರಕಾರ ನಿರ್ಧರಿಸಿದೆ.
ಕೇಂದ್ರದ ನಿರ್ಧಾರವನ್ನು ಅನುಸರಿಸಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು, ಈ ಕ್ರಮವು ಅವರಿಗೆ ವೈಯಕ್ತಿಕವಾಗಿ ನೀಡಿದ ಆಶ್ವಾಸನೆಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. ತರುವಾಯ, ಕೇಂದ್ರದ ನಿರ್ಧಾರದ ವಿರುದ್ಧ ರಾಜ್ಯ ವಿಧಾನಸಭೆಯಲ್ಲಿ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.

- Advertisement -