ತೊಕ್ಕೋಟಿನಲ್ಲಿ ಲಾರಿ-ಬೈಕ್ ಢಿಕ್ಕಿ: ನವ ದಂಪತಿ ಮೃತ್ಯು

Prasthutha|

ಲಾರಿಯೊಂದು ಬೈಕ್ ಮೇಲೆ ಹರಿದ ಪರಿಣಾಮ ನವದಂಪತಿ ದಾರುಣವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ತೊಕ್ಕೋಟು ಮೇಲ್ಸೇತುವೆಯಲ್ಲಿ ಇಂದು ಸಂಜೆ ಸಂಭವಿಸಿದೆ.

ಮೃತರನ್ನು ಬಜಾಲ್ ನಿವಾಸಿ ರಯಾನ್ ಫೆರ್ನಾಂಡಿಸ್ (35) ಮತ್ತು ಪ್ರಿಯಾ ಫೆರ್ನಾಂಡಿಸ್ (32) ಎಂದು ಗುರುತಿಸಲಾಗಿದೆ. ಮೃತರಿಬ್ಬರು ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದು, ಸಂಜೆ ಕರ್ತವ್ಯ ಮುಗಿಸಿ ಮನೆಗೆ ಹಿಂದಿರುಗುತ್ತಿರುವಾಗ ಘಟನೆ ನಡೆದಿದೆ ಎನ್ನಲಾಗಿದೆ.

- Advertisement -

ಬಂಗೇರ್ ಲೇನ್ ನಲ್ಲಿ ರುವ ತಮ್ಮ ಬಾಡಿಗೆ ಮನೆಯತ್ತ ಹೋಗುತ್ತಿರುವ ಸಂದರ್ಭದಲ್ಲಿ ತೊಕ್ಕೋಟು ಮೇಲ್ಸೇತುವೆ ಮೇಲೆ ಈ ಅಪಘಾತ ಸಂಭವಿಸಿದೆ.

ಬೈಕ್ ಉಳ್ಳಾಲ ಕಡೆಗೆ ತಿರುಗುವ ಸಂದರ್ಭ ಅತಿ ವೇಗವಾಗಿ ತೊಕ್ಕೋಟು ಮೇಲ್ಸೇತುವೆಯ ಮೇಲಿನಿಂದ ಬಂದ ಲಾರಿ ಡಿಕ್ಕಿ ಹೊಡೆದು, ದಂಪತಿಯ ಮೇಲೆ ಹರಿದಿದೆ ಎನ್ನಲಾಗಿದೆ. ಪ್ರಿಯಾ ಸ್ಥಳದಲ್ಲೇ ಮೃತಪಟ್ಟರೆ, ಫೆರ್ನಾಂಡಿಸ್ ಆಸ್ಪತ್ರೆ ಸಾಗಿಸುವ ಮಧ್ಯೆ ಸಾವನ್ನಪ್ಪಿದರು.

- Advertisement -