ನಳಿನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ : ಸಿದ್ದರಾಮಯ್ಯ

Prasthutha: October 22, 2020

ಬೆಂಗಳೂರು : “ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ” ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. “ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿ ತಕ್ಷಣ ಕಾಡಿಗೆ ಕೊಂಡು ಹೋಗಿ ಬಿಡಬೇಕು” ಎಂದು ಅವರು ಸಲಹೆ ನೀಡಿದ್ದಾರೆ. ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆಗೊಳಿಸಿರುವ ಅವರು ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಕಠಿಣ ಪದಗಳಿಂದ ವಾಗ್ದಾಳಿ ನಡೆಸಿದ್ದಾರೆ.

“ತಮ್ಮ ಪಕ್ಷ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸಗುಡಿಸಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲನ್ನು ಇನ್ನು ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ದಿ ಬರಬಹುದೇನೋ” ಎಂದು ಅವರು ತಿಳಿಸಿದ್ದಾರೆ.

“ನಳಿನ್ ಕುಮಾರ್ ಕಟೀಲು ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬು ಇಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ತು ಇಲ್ಲ’’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

“ಮಂಗಳೂರಿನಲ್ಲಿ ಎಲ್ಲೋ ಬೀದಿ ಅಲೆಯುತ್ತಿದ್ದ ಈ ನಳಿನ್ ಕುಮಾರ್ ಕಟೀಲ್ ಎಂಬ ಪೋಕರಿಯನ್ನು ಯಾರೋ ತಮ್ಮ ‘ಸಂತೋಷ’ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಿದ್ದಾರೆ’’ ಎಂದು ಅವರು ಹೇಳಿದ್ದಾರೆ.

“ಈಗ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪನವರ ತಲೆ ಮೇಲೆ ಕಟ್ಟಿ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು ನಳಿನ್ ಕುಮಾರ್ ಕಟೀಲು ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ’’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

“ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ನಳಿನ್ ಕುಮಾರ್ ಕಟೀಲ್ ಅವರಿಗೆ ಸ್ವಲ್ಪ ಬುದ್ದಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು’’ ಎಂದು ಅವರು ಹೇಳಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!